ಹರ್ಭಜನ್ ಸಿಂಗ್ ದಾಖಲೆ ಮುರಿದ ಆರ್ ಅಶ್ವಿನ್, ಟೆಸ್ಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ 3ನೇ ಯಶಸ್ವಿ ಬೌಲರ್
ಟೀಂ ಇಂಡಿಯಾದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಸೋಮವಾರ ಸ್ಪಿನ್ ದಿಗ್ಗಜ ಹರ್ಭಜನ್ ಸಿಂಗ್ ಅವರ ದಾಖಲೆಯನ್ನು ಮುರಿಯುವ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ಮೈಲುಗಲ್ಲು ಸಾಧಿಸಿದ್ದಾರೆ.
Published: 29th November 2021 08:04 PM | Last Updated: 29th November 2021 08:04 PM | A+A A-

ಭಾರತ-ನ್ಯೂಜಿಲ್ಯಾಂಡ್ ಮೊದಲ ಟೆಸ್ಟ್ ಪಂದ್ಯ
ಕಾನ್ಪುರ: ಟೀಂ ಇಂಡಿಯಾದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಸೋಮವಾರ ಸ್ಪಿನ್ ದಿಗ್ಗಜ ಹರ್ಭಜನ್ ಸಿಂಗ್ ಅವರ ದಾಖಲೆಯನ್ನು ಮುರಿಯುವ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ಮೈಲುಗಲ್ಲು ಸಾಧಿಸಿದ್ದಾರೆ.
ಆರ್ ಅಶ್ವಿನ್ ಅವರು ನ್ಯೂಜಿಲೆಂಡ್ ವಿರುದ್ದದ ಮೊದಲ ಟೆಸ್ಟ್ ಪಂದ್ಯದ 5 ವಿಕೆಟ್ ಪಡೆಯುವ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಟೀಂ ಇಂಡಿಯಾದ ಮೂರನೇ ಬೌಲರ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಇದನ್ನು ಓದಿ: ಕಾನ್ಪುರ ಟೆಸ್ಟ್: ನ್ಯೂಜಿಲ್ಯಾಂಡ್ ವಿರುದ್ಧ 1 ವಿಕೆಟ್ ನಿಂದ ಭಾರತಕ್ಕೆ ಕೈತಪ್ಪಿದ ವಿರೋಚಿತ ಗೆಲುವು, ಪಂದ್ಯ ಡ್ರಾ!
ನ್ಯೂಜಿಲೆಂಡ್ ವಿರುದ್ದ ಮೊದಲ ಇನಿಂಗ್ಸ್ನಲ್ಲಿ ಮೂರು ವಿಕೆಟ್ ಪಡೆದಿದ್ದ ಅಶ್ವಿನ್ ಅವರು, ಇದೀಗ 2ನೇ ಇನಿಂಗ್ಸ್ನಲ್ಲಿ ಎರಡು ವಿಕೆಟ್ ಕಬಳಿಸಿದ್ದಾರೆ. ಇದರೊಂದಿಗೆ ತಮ್ಮ 80ನೇ ಪಂದ್ಯದಲ್ಲಿ ಒಟ್ಟು 418 ವಿಕೆಟ್ಗಳನ್ನು ಪಡೆದಿದ್ದಾರೆ. ಈ ಮೂಲಕ 417 ವಿಕೆಟ್ ಪಡೆದು ಮೂರನೇ ಸ್ಥಾನದಲ್ಲಿದ್ದ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಿದ್ದಾರೆ.
ಈ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ ಅಗ್ರಸ್ಥಾನದಲ್ಲಿದ್ದು, ಕುಂಬ್ಳೆ ಟೆಸ್ಟ್ ಕ್ರಿಕೆಟ್ನಲ್ಲಿ 619 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 434 ವಿಕೆಟ್ ಪಡೆದಿರುವ ಕಪಿಲ್ ದೇವ್ 2ನೇ ಸ್ಥಾನದಲ್ಲಿದ್ದಾರೆ. ಇದೀಗ 418 ವಿಕೆಟ್ ಪಡೆದಿರುವ ಅಶ್ವಿನ್ 3ನೇ ಸ್ಥಾನ ಅಲಂಕರಿಸಿದ್ದಾರೆ. 4ನೇ ಸ್ಥಾನದಲ್ಲಿ ಹರ್ಭಜನ್ ಸಿಂಗ್ ಇದ್ದು, ಭಜ್ಜಿ 417 ವಿಕೆಟ್ ಉರುಳಿಸಿದ್ದಾರೆ.