ಐಪಿಎಲ್ 2021: ಪಂಜಾಬ್ ವಿರುದ್ಧ ಗೆದ್ದ ಆರ್ ಸಿಬಿ: ಪ್ಲೇ ಆಫ್ ಗೆ ಬೆಂಗಳೂರು ಎಂಟ್ರಿ!

ಇಂಡಿಯನ್ ಪ್ರೀಮಿಯರ್ ಲೀಗ್ ನ 14ನೇ ಆವೃತ್ತಿಯಲ್ಲಿ ಸ್ಪಿನ್ ಬೌಲರ್ ಯಜುವೇಂದ್ರ ಚಹಾಲ್ ಹಾಗೂ ಗ್ಲೆನ್ ಮ್ಯಾಕ್ಸ್ ವೆಲ್ ಅವರ ಭರ್ಜರಿ ಆಟದ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ, ಪ್ಲೇ ಆಫ್ ಗೆ ಪ್ರವೇಶ ಪಡೆದಿದೆ.
ಆರ್ ಸಿಬಿ ತಂಡ
ಆರ್ ಸಿಬಿ ತಂಡ

ಶಾರ್ಜಾ: ಇಂಡಿಯನ್ ಪ್ರೀಮಿಯರ್ ಲೀಗ್ ನ 14ನೇ ಆವೃತ್ತಿಯಲ್ಲಿ ಸ್ಪಿನ್ ಬೌಲರ್ ಯಜುವೇಂದ್ರ ಚಹಾಲ್ ಹಾಗೂ ಗ್ಲೆನ್ ಮ್ಯಾಕ್ಸ್ ವೆಲ್ ಅವರ ಭರ್ಜರಿ ಆಟದ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ, ಪ್ಲೇ ಆಫ್ ಗೆ ಪ್ರವೇಶ ಪಡೆದಿದೆ.

ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಬೆಂಗಳೂರು 20 ಓವರ್ ಗಳಲ್ಲಿ ಏಳು ವಿಕೆಟ್ ಗೆ 164 ರನ್ ಕಲೆ ಹಾಕಿದೆ. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಪಂಜಾಬ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಹೀಗಾಗಿ 6 ರನ್ ಗಳಿಂದ ಆರ್ ಸಿಬಿಗೆ ಶರಣಾಯಿತು. 

ಟೂರ್ನಿಯಲ್ಲಿ 12 ಪಂದ್ಯಗಳ ಪೈಕಿ ಆರ್ ಸಿಬಿ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇನ್ನು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವ ಆರ್ ಸಿಬಿ ಪ್ಲೇ ಆಫ್ ಗೆ ಎಂಟ್ರಿಕೊಟ್ಟಿದೆ. 

ಆರ್ ಸಿಬಿ ಪರ ವಿರಾಟ್ ಕೊಹ್ಲಿ 25, ದೇವದತ್ತ್ ಪಡಿಕ್ಕಲ್ 40, ಗ್ಲೇನ್ ಮ್ಯಾಕ್ಸ್ ವೆಲ್ 57 ಮತ್ತು ಎಬಿ ಡಿವಿಲಿಯರ್ಸ್ 23 ರನ್ ಗಳಿಸಿದ್ದಾರೆ. 

ಪಂಜಾಬ್ ಪರ ಕೆಎಲ್ ರಾಹುಲ್ 39, ಮಾಯಾಂಕ್ ಅಗರವಾಲ್ 57, ಮಾರ್ಕ್ರಾಮ್ 20 ಮತ್ತು ಶಾರೂಖ್ ಖಾನ್ 16 ರನ್ ಬಾರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com