ಐಪಿಎಲ್ 2021: ಆರ್ ಸಿಬಿ ವಿರುದ್ಧ ಸನ್ ರೈಸರ್ಸ್ ಹೈದ್ರಾಬಾದ್ ಗೆ ನಾಲ್ಕು ರನ್ ಗಳ ರೋಚಕ ಜಯ
ಸಂಘಟಿತ ಆಟದ ಪ್ರದರ್ಶನ ನೀಡಿದ ಸನ್ ರೈಸರ್ಸ್ ಹೈದರಾಬಾದ್ 4 ರನ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 14ನೇ ಆವೃತ್ತಿಯ ಐಪಿಎಲ್ 52ನೇ ಪಂದ್ಯದಲ್ಲಿ ಮಣಿಸಿತು.
Published: 07th October 2021 01:06 AM | Last Updated: 07th October 2021 01:06 PM | A+A A-

ಹೈದ್ರಾಬಾದ್ ಸನ್ ರೈಸರ್ಸ್ ತಂಡದ ಆಟಗಾರರ ಸಂಭ್ರಮ
ಅಬುಧಾಬಿ: ಸಂಘಟಿತ ಆಟದ ಪ್ರದರ್ಶನ ನೀಡಿದ ಸನ್ ರೈಸರ್ಸ್ ಹೈದರಾಬಾದ್ 4 ರನ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 14ನೇ ಆವೃತ್ತಿಯ ಐಪಿಎಲ್ 52ನೇ ಪಂದ್ಯದಲ್ಲಿ ಮಣಿಸಿತು.
ಮೊದಲು ಬ್ಯಾಟ್ ಮಾಡಿದ ಹೈದ್ರಾಬಾದ್ ಸನ್ ರೈಸರ್ಸ್ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 141 ರನ್ ಗಳಿಸಿತು. ಜೇಸನ್ ರಾಯ್ (44) ಹಾಗೂ ನಾಯಕ ಕೇನ್ ವಿಲಿಯಮ್ಸ್ (31) ರನ್ ಗಳ ಹೊರತಾಗಿಯೂ ಏಳು ವಿಕೆಟ್ ನಷ್ಟಕ್ಕೆ 141 ರನ್ ಗಳಿಸಲಷ್ಟೇ ಶಕ್ತವಾಯಿತು.
ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಆರ್ ಸಿಬಿಗೆ ನಾಯಕ ವಿರಾಟ್ ಕೊಹ್ಲಿ, ಕೇವಲ 5 ರನ್ ಗಳಿಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ದೇವದತ್ ಪಡಿಕ್ಕಲ್ (41) ಮತ್ತು ಗ್ಲೇನ್ ಮ್ಯಾಕ್ಸ್ ವೆಲ್ (40) ಎಬಿ ಡಿವಿಲಿಯರ್ಸ್ (19) ಶಾಬಾಜ್ ಅಹಮದ್ (14) ರನ್ ಹೊರತುಪಡಿಸಿದರೆ ಬೇರೆ ಯಾವುದೇ ಆಟಗಾರರು ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲರಾದರು. ಆರ್ ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರಿಂದಾಗಿ ಸನ್ ರೈಸರ್ಸ್ ಹೈದ್ರಾಬಾದ್ ನಾಲ್ಕು ರನ್ ಗಳಿಂದ ರೋಚಕ ಗೆಲುವು ದಾಖಲಿಸಿತು.
A flurry of emotions in both the camps as @SunRisers clinch a thriller against #RCB.
— IndianPremierLeague (@IPL) October 6, 2021
Scorecard - https://t.co/EqmOIV0UoV #RCBvSRH #VIVOIPL pic.twitter.com/6EicLI02T0