ಐಪಿಎಲ್ 2021: ಹೈದ್ರಾಬಾದ್ ವಿರುದ್ಧ 42 ರನ್ ಗಳಿಂದ ಗೆದ್ದ ಮುಂಬೈ, ಪ್ಲೇ-ಆಫ್ ಕನಸು ಭಗ್ನ
ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ 42 ರನ್ ಗಳ ಅಂತರದಿಂದ ಗೆಲುವು ದಾಖಲಿಸಿದರೂ ಮುಂಬೈ ಇಂಡಿಯನ್ಸ್ ತಂಡ ಪ್ಲೇ ಆಫ್ ಹಂತ ಪ್ರವೇಶಿಸುವಲ್ಲಿ ವಿಫಲವಾಗಿದೆ.
Published: 09th October 2021 12:52 AM | Last Updated: 09th October 2021 01:14 PM | A+A A-

ಮುಂಬೈ ಇಂಡಿಯನ್ಸ್ ತಂಡದ ಆಟಗಾರರು
ಅಬುದಾಬಿ: ಇಲ್ಲಿನ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ 42 ರನ್ ಗಳ ಅಂತರದಿಂದ ಗೆಲುವು ದಾಖಲಿಸಿದರೂ ಮುಂಬೈ ಇಂಡಿಯನ್ಸ್ ತಂಡ ಪ್ಲೇ ಆಫ್ ಹಂತ ಪ್ರವೇಶಿಸುವಲ್ಲಿ ವಿಫಲವಾಗಿದೆ. ಅತ್ತ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಅಂತಿಮ ನಾಲ್ಕರ ಘಟ್ಟಕ್ಕೆ ಲಗ್ಗೆ ಯಿಟ್ಟಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ಪರ ಇಶಾನ್ ಕಿಶನ್ 84, ಸೂರ್ಯಕುಮಾರ್ ಯಾದವ್ 82, ನಾಯಕ ರೋಹಿತ್ ಶರ್ಮಾ 18 ರನ್ ಗಳ ನೆರವಿನೊಂದಿಗೆ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಬೃಹತ್ 235 ರನ್ ಗಳಿಸಿತು.
ಈ ಗುರಿ ಬೆನ್ನತ್ತಿದ್ದ ಸನ್ ರೈಸರ್ಸ್ ಹೈದ್ರಾಬಾದ್ ಪರ ಮನೀಶ್ ಪಾಂಡೆ 69, ಜೇಸನ್ ರಾಯ್ 34, ಅಭಿಷೇಕ್ ಶರ್ಮಾ ಅವರ 33 ರನ್ ಗಳ ನೆರವಿನೊಂದಿಗೆ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 193 ರನ್ ಗಳಿಸಷ್ಟೇ ಶಕ್ತವಾಯಿತು. ಇದರೊಂದಿಗೆ 42 ರನ್ ಗಳ ಅಂತರದೊಂದಿಗೆ ಹೈದ್ರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆಲುವು ಸಾಧಿಸಿತು. ಇಶಾನ್ ಕಿಶನ್ ಪಂದ್ಯ ಶ್ರೇಷ್ಟ ಆಟಗಾರ ಪ್ರಶಸ್ತಿಗೆ ಭಾಜನರಾದರು.