ಟಿ-20 ವಿಶ್ವಕಪ್: ಭಾರತ ತಂಡಕ್ಕೆ ಮಾರ್ಗದರ್ಶಕರಾಗಲು ಧೋನಿ ಗೌರವ ಧನ ಪಡೆಯುತ್ತಿಲ್ಲ- ಬಿಸಿಸಿಐ
ಮುಂಬರುವ ಟಿ-20 ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾಕ್ಕೆ ಮಾರ್ಗದರ್ಶಕರಾಗಲು ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಬಿಸಿಸಿಐನಿಂದ ಯಾವುದೇ ಶುಲ್ಕವನ್ನು ಪಡೆಯಲ್ಲ ಎಂದು ಕಾರ್ಯದರ್ಶಿ ಜಯ್ ಶಾ ಮಂಗಳವಾರ ಹೇಳಿದ್ದಾರೆ.
Published: 12th October 2021 07:33 PM | Last Updated: 12th October 2021 08:30 PM | A+A A-

ಮಹೇಂದ್ರ ಸಿಂಗ್ ಧೋನಿ
ನವದೆಹಲಿ: ಮುಂಬರುವ ಟಿ-20 ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾಕ್ಕೆ ಮಾರ್ಗದರ್ಶಕರಾಗಲು ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಬಿಸಿಸಿಐನಿಂದ ಯಾವುದೇ ಶುಲ್ಕವನ್ನು ಪಡೆಯಲ್ಲ ಎಂದು ಕಾರ್ಯದರ್ಶಿ ಜಯ್ ಶಾ ಮಂಗಳವಾರ ಹೇಳಿದ್ದಾರೆ.
ಟಿ-20 ವಿಶ್ವಕಪ್ ಗಾಗಿ ಭಾರತ ತಂಡದ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಲು ಎಂಎಸ್ ಧೋನಿ ಯಾವುದೇ ಗೌರವ ಧನ ಪಡೆಯುತ್ತಿಲ್ಲ ಎಂದು ಶಾ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಅಕ್ಟೋಬರ್ 24 ರಂದು ನಡೆಯಲಿರುವ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ- ಪಾಕಿಸ್ತಾನ ವಿರುದ್ಧ ಸೆಣಸಲಿದೆ.
40 ವರ್ಷದ ಧೋನಿ ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತರಾದರು. 2019 ರ ವಿಶ್ವಕಪ್ ಸೆಮಿಫೈನಲ್ ಆಟವೇ ಅವರ ಕೊನೆಯ ಪಂದ್ಯವಾಗಿದೆ."MS Dhoni is not charging any honorarium for his services as the mentor of Indian team for the T20 World Cup," BCCI Secretary Jay Shah to ANI
— ANI (@ANI) October 12, 2021
(file photo) pic.twitter.com/DQD5KaYo7v