ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಮುಖ್ಯ ಕೋಚ್? ಕೊಹ್ಲಿ ಪ್ರತಿಕ್ರಿಯಿಸಿದ್ದು ಹೀಗೆ

 ಟಿ-20 ವಿಶ್ವಕಪ್ ನಂತರ ಲಿಜೆಂಡರಿ ರಾಹುಲ್ ದ್ರಾವಿಡ್ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಲಿದ್ದಾರೆ ಸುದ್ದಿಗಳು ಹರಿದಾಡುತ್ತಿವೆ. ಈ ಕುರಿತಂತೆ ಟೀ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.
ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ
ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ

ದುಬೈ: ಟಿ-20 ವಿಶ್ವಕಪ್ ನಂತರ ಲಿಜೆಂಡರಿ ರಾಹುಲ್ ದ್ರಾವಿಡ್ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಲಿದ್ದಾರೆ ಸುದ್ದಿಗಳು ಹರಿದಾಡುತ್ತಿವೆ. ಈ ಕುರಿತಂತೆ ಟೀ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.

ರವಿಶಾಸ್ತ್ರೀ ನಂತರ ರಾಹುಲ್ ದ್ರಾವಿಡ್ ಅವರನ್ನು ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ನೇಮಕ ಮಾಡಲು ಬಿಸಿಸಿಐ ಕೂಡಾ ಸಮ್ಮತಿಸಿದೆ ಎಂಬಂತಹ ವರದಿಗಳ ಕುರಿತಂತೆ ಪ್ರತಿಕ್ರಿಯಿಸಿದ ವಿರಾಟ್ ಕೊಹ್ಲಿ, ಆ ಬಗ್ಗೆ ಏನು ನಡೆಯುತ್ತಿದೆ ಎಂಬುದು ನಿಖರವಾಗಿ ತಿಳಿದಿಲ್ಲ. ಯಾರೊಂದಿಗೂ ಇನ್ನೂ ವಿವರವಾದ ಚರ್ಚೆ ನಡೆಸಿಲ್ಲ ಎಂದು ತಿಳಿಸಿದರು.

ಯುಎಇ ಮತ್ತು ಒಮನ್ ನಲ್ಲಿ ಭಾನುವಾರದಿಂದ ಆರಂಭವಾಗಿರುವ ಟಿ-20 ವಿಶ್ವಕಪ್  ಮೊದಲ ಸುತ್ತಿನ ಪಂದ್ಯಗಳ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ವಿರಾಟ್ ಕೊಹ್ಲಿ, ಈ ಬಗ್ಗೆ ಏನೂ ಗೊತ್ತಿಲ್ಲ ಎಂದರು.
 
48 ವರ್ಷದ  ರಾಹುಲ್ ದ್ರಾವಿಡ್ ದೇಶ ಕಂಡ ಅತ್ಯುತ್ತಮ ಕ್ರಿಕೆಟ್ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಆರು ವರ್ಷಗಳಿಂದ ಅವರು ರಾಷ್ಟ್ರೀಯ 'ಎ' ಮತ್ತು 19 ವರ್ಷದೊಳಗಿನವರ ತಂಡದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದು, ರಿಷಭ್ ಪಂತ್, ಅವೇಶ್ ಖಾನ್ ,ಪೃಥ್ವಿ ಶಾ, ಹನುಮ ವಿಹಾರಿ ಮತ್ತು ಶುಭ್ ಮನ್ ಗಿಲ್ ಅವಂತಹ ಆಟಗಾರರಿಗೆ ತರಬೇತಿ ನೀಡಿ ಸಜ್ಜುಗೊಳ್ಳಿಸಿದ್ದಾರೆ. 

ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡಮಿಯ ಮುಖ್ಯಸ್ಥರಾಗಿರುವ ರಾಹುಲ್ ದ್ರಾವಿಡ್, ಇತ್ತೀಚಿಗೆ ಮುಕ್ತಾಯಗೊಂಡ  ಐಪಿಎಲ್ ಸಂದರ್ಭದಲ್ಲಿ ದುಬೈನಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾ ಅವರೊಂದಿಗೆ ವಿವರವಾದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com