
ರಾಹುಲ್ ದ್ರಾವಿಡ್
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಭಾರತ ಕ್ರಿಕೆಟ್ ಮಂಡಳಿ ಬಿಸಿಸಿಐ, ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ರನ್ನು ಟೀಮ್ ಇಂಡಿಯಾ ಕೋಚ್ ಸ್ಥಾನಕ್ಕೆ ಮನವೊಲಿಸುವಲ್ಲಿ ಸಫಲವಾಗಿದೆ.
ಇದನ್ನೂ ಓದಿ: ಐಪಿಎಲ್ 2021: ಕೋಲ್ಕತ್ತಾ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ಚೆನ್ನೈ ಸೂಪರ್ ಕಿಂಗ್ಸ್!
ಈ ಹಿಂದೆ ಈ ಸ್ಥಾನವನ್ನು ದ್ರಾವಿಡ್ ನಿರಾಕರಿಸಿದ್ದರ ಹೊರತಾಗಿಯೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜೈ ಶಾ ಅವರು ದುಬೈನಲ್ಲಿ ದ್ರಾವಿಡ್ ರನ್ನು ಭೇಟಿಯಾಗಿದ್ದರು.
ದೀರ್ಘ ಕಾಲದ ಸಂಧಾನದ ನಂತರ ರಾಹುಲ್ ದ್ರಾವಿಡ್ 2 ವರ್ಷ ಅವಧಿಗೆ ಟೀಮ್ ಇಂಡಿಯಾ ಕೋಚ್ ಹುದ್ದೆ ನಿರ್ವಹಿಸಲು ಸಮ್ಮತಿ ಸೂಚಿಸಿದ್ದಾರೆ.
ಇದನ್ನೂ ಓದಿ: ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ 'ದಿ ವಾಲ್' ರಾಹುಲ್ ದ್ರಾವಿಡ್ ಹಂಗಾಮಿ ಮುಖ್ಯ ಕೋಚ್?
ಸದ್ಯದ ಕೋಚ್ ರವಿ ಶಾಸ್ತ್ರಿ ವಿಶ್ವಕಪ್ ನಂತರ ಕೋಚ್ ಹುದ್ದೆಯಲ್ಲಿ ಮುಂದುವರಿಯುವುದಿಲ್ಲ ಎನ್ನುವುದು ಖಚಿತವಾಗುತ್ತಿದ್ದಂತೆಯೇ ಬಿಸಿಸಿಐ ರಾಹುಲ್ ದ್ರಾವಿಡ್ ರ ಬೆನ್ನು ಬಿದ್ದಿತ್ತು.