ಪಾಕಿಸ್ತಾನಕ್ಕೆ ಐತಿಹಾಸಿಕ ಜಯ; ವಿಶ್ವಕಪ್ ನಲ್ಲಿ ಮೊದಲ ಗೆಲುವು, 10 ವಿಕೆಟ್ ಗಳಿಂದ ಭಾರತವನ್ನು ಮಣಿಸಿದ ಮೊದಲ ತಂಡ
ದುಬೈ: ಭಾರತದ ವಿರುದ್ಧ ಪಾಕಿಸ್ತಾನ ದಾಖಲಿಸಿದ ಜಯ ಐತಿಹಾಸಿಕ ಗೆಲುವಾಗಿದ್ದು, ವಿಶ್ವಕಪ್ ನಲ್ಲಿ ಮೊದಲ ಮತ್ತು ಭಾರತವನ್ನು 10 ವಿಕೆಟ್ ಗಳಿಂದ ಭಾರತವನ್ನು ಮಣಿಸಿದ ಮೊದಲ ತಂಡ ಎಂಬ ಹಿರಿಮೆಗೆ ಪಾತ್ರವಾಗಿದೆ.
ಭಾರತದ ವಿರುದ್ಧ ಪಾಕಿಸ್ತಾನ ಸಾಧಿಸಿರುವ ಈ ಗೆಲುವು ಸಾಮಾನ್ಯದ್ದಲ್ಲ. ಟಿ20 ವಿಶ್ವಕಪ್ ಇತಿಹಾಸದಲ್ಲೇ ಭಾರತದ ವಿರುದ್ಧ ಪಾಕಿಸ್ತಾನಕ್ಕೆ ಮೊದಲ ಗೆಲುವಾಗಿದೆ. ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಕೊನೆಯ ಬಾರಿಗೆ ಮುಖಾಮುಖಿಯಾಗಿದ್ದು ಕಳೆದ 2019ರ ಏಕದಿನ ವಿಶ್ವಕಪ್‌ನಲ್ಲಿ. ರೋಹಿತ್ ಶರ್ಮಾ ಸಿಡಿಸಿದ ಭರ್ಜರಿ ಶತಕದ ನೆರವಿನಿಂದ ಭಾರತ ಆ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು. ಅಂತೆಯೇ ಭಾರತ ಹಾಗೂ ಪಾಕಿಸ್ತಾನ ತಂಡಗಳು ಟಿ20 ವಿಶ್ವಕಪ್‌ನಲ್ಲಿ ಈ ವರೆಗೆ 5 ಬಾರಿ ಮುಖಾಮುಖಿಯಾಗಿದ್ದು ಭಾರತ 4ರಲ್ಲಿ ಗೆಲುವು ಸಾಧಿಸಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ರದ್ದಾಗಿದೆ. ಹೀಗಾಗಿ ಭಾರತ ತಂಡ ಟಿ20 ವಿಶ್ವಕಪ್‌ನಲ್ಲಿಯೂ ಅಜೇಯ ಸಾಧನೆ ಮಾಡಿದೆ.
2007ರಲ್ಲಿ ಆರಂಭವಾದ ಟಿ20 ವಿಶ್ವಕಪ್ ನಲ್ಲಿ ಲೀಗ್ ಹಂತ ಮತ್ತು ಫೈನಲ್ ನಲ್ಲಿ ಪಾಕಿಸ್ತಾನವನ್ನು ಭಾರತ ಮಣಿಸಿತ್ತು. ಬಳಿಕ 2012, 2014, 2016 ಪಾಕಿಸ್ತಾನವನ್ನು ಮಣಿಸಿತ್ತು. ಆದರೆ ಇದೇ ಅಜೇಯ ಓಟ 2021ರಲ್ಲಿ ಸಾಧ್ಯವಾಗಲಿಲ್ಲ. ಭಾರತ ನೀಡಿದ್ದ 152 ರನ್ ಗಳ ಸವಾಲಿನ ಗುರಿಯನ್ನು ಪಾಕಿಸ್ತಾನ ಯಾವುದೇ ಒತ್ತಡಕ್ಕೆ ಒಳಗಾಗದೇ ಯಶಸ್ವಿಯಾಗಿ ತಲುಪಿ ಐತಿಹಾಸಿಕ ಗೆಲುವು ದಾಖಲಿಸಿದೆ. ಆರಂಭಿಕರಾದ ನಾಯಕ ಬಾಬರ್ ಆಜಂ (68*) ಹಾಗೂ ಮೊಹಮ್ಮದ್ ರಿಜ್ವಾನ್ (79*) ಶತಕದ ಜೊತೆಯಾಟದ ನೆರವಿನಿಂದ 17.5 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ ಭರ್ಜರಿ ಗೆಲುವು ದಾಖಲಿಸಿದೆ.
10 ವಿಕೆಟ್ ಗಳಿಂದ ಭಾರತವನ್ನು ಮಣಿಸಿದ ಮೊದಲ ತಂಡ
ಅಂತೆಯೇ ಟಿ20 ಕ್ರಿಕೆಟ್ ನಲ್ಲಿ ಭಾರತ ತಂಡವನ್ನು 10 ವಿಕೆಟ್ ಗಳ ಅಂತರದಲ್ಲಿ ಮಣಿಸಿದ ಮೊದಲ ತಂಡ ಎಂಬ ಕೀರ್ತಿಗೂ ಪಾಕಿಸ್ತಾನ ಭಾಜನವಾಗಿದೆ. ಈ ಹಿಂದೆ 2007ರಲ್ಲಿ ಶ್ರೀಲಂಕಾ ವಿರುದ್ಧ ಆಸ್ಚ್ರೇಲಿಯಾ 10 ವಿಕೆಟ್ ಗಳ ಅಂತರದಲ್ಲಿ ಜಯ ಸಾಧಿಸಿತ್ತು. ಬಳಿಕ 2012ರಲ್ಲಿಜಿಂಬಾಬ್ವೆ ವಿರುದ್ಘ ದಕ್ಷಿಣ ಆಫ್ರಿಕಾ 10 ವಿಕೆಟ್ ಗಳ ಜಯ ಸಾಧಿಸಿತ್ತು. ಬಳಿಕ ಹಾಲಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಒಮನ್ ತಂಡ ಪಪುವಾ ನ್ಯೂಗಿನಿಯಾ ವಿರುದ್ಧ 10 ವಿಕೆಟ್ ಗಳ ಜಯ ಸಾಧಿಸಿದ್ದು, ಇದೀಗ ಪಾಕಿಸ್ತಾನ ತಂಡ ಭಾರತದ 10 ವಿಕೆಟ್ ಗಳ ಜಯ ಸಾಧಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ