ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ ರಾಹುಲ್ ದ್ರಾವಿಡ್, ವಿವಿಎಸ್ ಲಕ್ಷ್ಮಣ್ ಎನ್‌ಸಿಎ ಮುಖ್ಯಸ್ಥ?

ಕನ್ನಡಿಗ, ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಅವರು ಮಂಗಳವಾರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಔಪಚಾರಿಕವಾಗಿ ಅರ್ಜಿ ಸಲ್ಲಿಸಿದ್ದು, ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್ ಆಗುವುದು ಬಹುತೇಕ ಖಚಿತವಾಗಿದೆ.
ರಾಹುಲ್ ದ್ರಾವಿಡ್
ರಾಹುಲ್ ದ್ರಾವಿಡ್

ನವದೆಹಲಿ: ಕನ್ನಡಿಗ, ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಅವರು ಮಂಗಳವಾರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಔಪಚಾರಿಕವಾಗಿ ಅರ್ಜಿ ಸಲ್ಲಿಸಿದ್ದು, ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್ ಆಗುವುದು ಬಹುತೇಕ ಖಚಿತವಾಗಿದೆ.

ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್ ಸಿಎ)ಯ ಮುಖ್ಯಸ್ಥರಾಗಿರುವ ರಾಹುಲ್ ದ್ರಾವಿಡ್ ಅವರು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರ ಮೊದಲ ಮತ್ತು ಏಕೈಕ ಆಯ್ಕೆಯಾಗಿದ್ದಾರೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ.

ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಮುಖ್ಯ ಕೋಚ್ ರವಿ ಶಾಸ್ತ್ರಿ ಅವರ ಕಾರ್ಯಾವಧಿ ಪೂರ್ಣಗೊಳ್ಳಲಿದೆ. ಹೀಗಾಗಿ ಹೊಸ ಕೋಚ್ ಹುದ್ದೆಗಾಗಿ ಇತ್ತೀಚೆಗಷ್ಟೇ ಬಿಸಿಸಿಐ ಅರ್ಜಿ ಆಹ್ವಾನಿಸಿತ್ತು ಮತ್ತು ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿತ್ತು.

ಬಿಸಿಸಿಐ ಮುಖ್ಯ ಕೋಚ್, ಬ್ಯಾಟಿಂಗ್ ಕೋಚ್, ಬೌಲಿಂಗ್ ಕೋಚ್, ಫೀಲ್ಡಿಂಗ್ ಕೋಚ್ ಮತ್ತು ಎನ್‌ಸಿಎ ಮುಖ್ಯಸ್ಥ ಸೇರಿದಂತೆ ಹಲವಾರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಅದರಂತೆ ಭಾರತ ತಂಡದ ಮಾಜಿ ವಿಕೆಟ್ ಕೀಪರ್ ಅಜಯ್ ರಾತ್ರಾ ಟೀಮ್ ಇಂಡಿಯಾದ ಫೀಲ್ಡಿಂಗ್ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ರಾತ್ರಾ ಅವರು ಟೀಮ್ ಇಂಡಿಯಾ ಪರ 6 ಟೆಸ್ಟ್ ಮತ್ತು 12 ಏಕದಿನ ಪಂದಗಳನ್ನಾಡಿದ್ದಾರೆ. 

ಇನ್ನು ದ್ರಾವಿಡ್ ಅವರಿಂದ ತೆರವಾಗುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಮುಖ್ಯಸ್ಥರಾಗಿ ವಿವಿಎಸ್ ಲಕ್ಷ್ಮಣ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com