ಸಚಿನ್ ಹಿಂದಿಕ್ಕಿ, ಅತ್ಯಂತ ವೇಗವಾಗಿ 23,000 ಅಂತಾರಾಷ್ಟ್ರೀಯ ರನ್ ದಾಖಲಿಸಿದ ವಿರಾಟ್ ಕೊಹ್ಲಿ!

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಗುರುವಾರ  23,000 ಅಂತಾರಾಷ್ಟ್ರೀಯ ರನ್ ಗಳನ್ನು ದಾಖಲಿಸಿದ ವೇಗದ ಬ್ಯಾಟ್ಸ್ ಮನ್ ಎಂಬ ಖ್ಯಾತಿಗೊಳಗಾದರು.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ಲಂಡನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಗುರುವಾರ  23,000 ಅಂತಾರಾಷ್ಟ್ರೀಯ ರನ್ ಗಳನ್ನು ದಾಖಲಿಸಿದ ವೇಗದ ಬ್ಯಾಟ್ಸ್ ಮನ್ ಎಂಬ ಖ್ಯಾತಿಗೊಳಗಾದರು.

ಒವಲ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದ ವೇಳೆ ಕೊಹ್ಲಿ ಈ ಸಾಧನೆ ಮಾಡಿದರು. ವಿರಾಟ್ ಕೊಹ್ಲಿ ಕೇವಲ 490 ಇನ್ನಿಂಗ್ಸ್ ನಲ್ಲಿ ಈ ದಾಖಲೆಯನ್ನು ಮಾಡಿದರೆ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಇದೇ ಸಾಧನೆಗೆ 522 ಇನ್ನಿಂಗ್ಸ್ ತೆಗೆದುಕೊಂಡಿದ್ದರು. ಆಸ್ಟ್ರೇಲಿಯಾದ ಮಾಜಿ ಕ್ಯಾಪ್ಟನ್ ರಿಕಿ ಪಾಟಿಂಗ್ 544 ಇನ್ನಿಂಗ್ಸ್ ಗಳಲ್ಲಿ 23,000 ಅಂತಾರಾಷ್ಟ್ರೀಯ ರನ್ ಗಳಿಸಿದ್ದರು.

ಕಳೆದ 51 ಇನ್ನಿಂಗ್ಸ್ ಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಒಂದೇ ಒಂದು ಶತಕವನ್ನು ದಾಖಲಿಸದ ಕೊಹ್ಲಿ ಸದ್ಯ ರನ್ ಗಳ ಬರ ಎದುರಿಸುತ್ತಿದ್ದಾರೆ. 2019ರಲ್ಲಿ ಕೊಲ್ಕತ್ತಾದ ಈಡನ್ ಗಾರ್ಡ್ ನಲ್ಲಿ ಬಾಂಗ್ಲಾದೇಶ ವಿರುದ್ಧ ಕೊನೆಯ ಬಾರಿಗೆ ಶತಕ ಗಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com