4ನೇ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ, ಭಾರತಕ್ಕೆ 2-1 ಅಂತರ ಮುನ್ನಡೆ!
ರೋಹಿತ್ ಶರ್ಮಾರ ಭರ್ಜರಿ ಶತಕದ ನೆರವಿನೊಂದಿಗೆ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ.
Published: 06th September 2021 09:28 PM | Last Updated: 06th September 2021 09:28 PM | A+A A-

ಟೀಂ ಇಂಡಿಯಾ
ಓವಲ್(ಲಂಡನ್): ರೋಹಿತ್ ಶರ್ಮಾರ ಭರ್ಜರಿ ಶತಕದ ನೆರವಿನೊಂದಿಗೆ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ.
ಓವಲ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಎರಡನೇ ಇಂಗ್ಲೆಂಡ್ ತಂಡ 210 ರನ್ ಗಳಿಗೆ ಆಲೌಟ್ ಆಗಿದ್ದು 157 ರನ್ ಗಳೊಂದಿಗೆ ಭಾರತಕ್ಕೆ ಶರಣಾಗಿದೆ.
ಮೊದಲ ಇನ್ನಿಂಗ್ಸ್ ನಲ್ಲಿ 191 ರನ್ ಗಳಿಗೆ ಟೀಂ ಇಂಡಿಯಾ ಆಲೌಟ್ ಆಗಿತ್ತು. ನಂತರ ಬ್ಯಾಟಿಂಗ್ ಆರಂಭಿಸಿದ್ದ ಇಂಗ್ಲೆಂಡ್ 290 ರನ್ ಗಳ ಕಲೆ ಹಾಕಿ 99 ರನ್ ಗಳ ಮುನ್ನಡೆ ಸಾಧಿಸಿತ್ತು. ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ಭರ್ಜರಿ ಬ್ಯಾಟಿಂಗ್ ಮಾಡಿದ್ದು 466 ರನ್ ಗಳ ಕಲೆ ಹಾಕಿತು. ಇದರೊಂದಿಗೆ ಇಂಗ್ಲೆಂಡ್ ತಂಡಕ್ಕೆ 368 ರನ್ ಗಳ ಬೃಹತ್ ಮೊತ್ತದ ಗುರಿ ನೀಡಿತ್ತು.
ನಾಲ್ಕನೇ ದಿನಾದಟದಂತ್ಯಕ್ಕೆ ಇಂಗ್ಲೆಂಡ್ ವಿಕೆಟ್ ಕಳೆದುಕೊಳ್ಳದೆ 77 ರನ್ ಗಳಿಸಿತ್ತು. ಇಂದು ಐದನೇ ದಿನ ಆರಂಭಿಸಿದ ಇಂಗ್ಲೆಂಡ್ ಆಟಗಾರರಿಗೆ ಉಮೇಶ್ ಯಾದವ್, ಬುಮ್ರಾ ಸೇರಿದಂತೆ ಭಾರತೀಯ ಬೌಲರ್ ಗಳು ಕಾಡಿದ್ದು ಅಂತಿಮವಾಗಿ 210 ರನ್ ಗಳಿಗೆ ಆಲೌಟ್ ಆಯಿತು.
ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-1 ಅಂತರದಿಂದ ಮುನ್ನಡೆ ಸಾಧಿಸಿದೆ.