ಐಸಿಸಿ ಟೆಸ್ಟ್ ರ್ಯಾಂಕಿಂಗ್: ಶಾರ್ದೂಲ್, ಬುಮ್ರಾ ಜಿಗಿತ
ಓವಲ್ನಲ್ಲಿ ನಡೆದ ನಾಲ್ಕನೇ ಟೆಸ್ಟ್ನಲ್ಲಿ ಇಂಗ್ಲೆಂಡ್ ಬ್ಯಾಟ್ಸ್ಮನ್ ಓಲಿ ಪೋಪ್ ಮತ್ತು ಭಾರತದ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಅವರು ಉತ್ತಮ ಪ್ರದರ್ಶನ ನೀಡಿದ್ದರ ಪರಿಣಾಮ...
Published: 08th September 2021 11:37 PM | Last Updated: 08th September 2021 11:39 PM | A+A A-

ಜಸ್ಪ್ರೀತ್ ಬುಮ್ರಾ
ದುಬೈ: ಓವಲ್ನಲ್ಲಿ ನಡೆದ ನಾಲ್ಕನೇ ಟೆಸ್ಟ್ನಲ್ಲಿ ಇಂಗ್ಲೆಂಡ್ ಬ್ಯಾಟ್ಸ್ಮನ್ ಓಲಿ ಪೋಪ್ ಮತ್ತು ಭಾರತದ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಅವರು ಉತ್ತಮ ಪ್ರದರ್ಶನ ನೀಡಿದ್ದರ ಪರಿಣಾಮ ಬುಧವಾರ ಬಿಡುಗಡೆಯಾದ ಪುರುಷರ ಟೆಸ್ಟ್ ಶ್ರೇಯಾಂಕದಲ್ಲಿ ಬಡ್ತಿ ಪಡೆದಿದ್ದಾರೆ.
ಪೋಪ್ ಜಹಾನ್ ಮೊದಲ ಇನ್ನಿಂಗ್ಸ್ನಲ್ಲಿ 82 ರನ್ ಗಳಿಸಿ ಒಂಬತ್ತು ಸ್ಥಾನ ಜಿಗಿತ ಕಂಡಿದ್ದು, 49ನೇ ಸ್ಥಾನದಲ್ಲಿದ್ದಾರೆ.
ಇನ್ನೂ ಶಾರ್ದೂಲ್ ಎರಡೂ ಇನ್ನಿಂಗ್ಸ್ಗಳಲ್ಲಿ ಅರ್ಧ ಶತಕಗಳೊಂದಿಗೆ 59 ಸ್ಥಾನ ಜಿಗಿದು 79ನೇ ಸ್ಥಾನದಲ್ಲಿದ್ದಾರೆ. 29 ವರ್ಷದ ಅವರು ಬೌಲಿಂಗ್ ಶ್ರೇಯಾಂಕದಲ್ಲಿ ಏಳು ಸ್ಥಾನಗಳನ್ನು ಏರಿಕೆ ಕಂಡಿದ್ದಾರೆ. ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆದ ನಂತರ, ಬೌಲರ್ಗಳ ಪಟ್ಟಿಯಲ್ಲಿ 49ನೇ ಸ್ಥಾನ ತಲುಪಿದ್ದಾರೆ.
ಭಾರತೀಯ ಆರಂಭಿಕ ಆಟಗಾರ ರೋಹಿತ್ ಶರ್ಮಾ ತನ್ನ ಐದನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ, ಎರಡನೇ ಇನ್ನಿಂಗ್ಸ್ನಲ್ಲಿ 127 ರನ್ ಗಳಿಸಿದ ನಂತರ ಆರನೇ ಶ್ರೇಯಾಂಕದ ನಾಯಕ ವಿರಾಟ್ ಕೊಹ್ಲಿಗಿಂತ 30 ಅಂಕ ಹೆಚ್ಚಾಗಿದೆ. ಮತ್ತೊಂದೆಡೆ, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆದ ಕಾರಣ ಬೌಲರ್ಗಳ ಪಟ್ಟಿಯಲ್ಲಿ 10 ರಿಂದ 9ನೇ ಸ್ಥಾನಕ್ಕೆ ಏರಿದ್ದಾರೆ.
ಇದನ್ನು ಓದಿ: ಕಪಿಲ್ ದೇವ್ ದಾಖಲೆ ಮುರಿದ ಬುಮ್ರಾ, ಟೆಸ್ಟ್ ನಲ್ಲಿ ಅತ್ಯಂತ ವೇಗವಾಗಿ 100 ವಿಕೆಟ್ ಪಡೆದ ಭಾರತೀಯ ವೇಗಿ
ಓವಲ್ನಲ್ಲಿ ನಡೆದ ಈ ಪಂದ್ಯದಲ್ಲಿ ವೇಗಿ ಬೂಮ್ರಾ ಎದುರಾಳಿ ತಂಡದ ಒಲಿ ಪೋಪ್ ಮತ್ತು ಜಾನಿ ಬೇಸ್ಟೊ ಅವರನ್ನು ಬೌಲ್ಡ್ ಮಾಡಿದ್ದರು. ಭಾರತ ಪಂದ್ಯವನ್ನು 157 ರನ್ಗಳಿಂದ ಗೆದ್ದುಕೊಂಡಿತ್ತು.
ಬೌಲರ್ಗಳ ಪೈಕಿ ಅಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಅಗ್ರಸ್ಥಾನದಲ್ಲಿದ್ದು, ಭಾರತದ ಆರ್. ಅಶ್ವಿನ್ ಎರಡನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆಲ್ರೌಂಡರ್ಗಳ ಪಟ್ಟಿಯಲ್ಲಿ ಅಶ್ವಿನ್ ಅವರು ಒಂದು ಸ್ಥಾನ ಕುಸಿತ ಕಂಡು ಐದನೇ ಸ್ಥಾನದಲ್ಲಿದ್ದಾರೆ. ಜಡೇಜ ಮೂರನೇ ಸ್ಥಾನದಲ್ಲಿ ಸ್ಥಿರವಾಗಿದ್ದಾರೆ.