ಮ್ಯಾಂಚೆಸ್ಟರ್‌ ಟೆಸ್ಟ್ ಪಂದ್ಯಕ್ಕೂ ಒಂದು ದಿನ ಮುನ್ನ ಟೀಂ ಇಂಡಿಯಾದ ಮತ್ತೊಬ್ಬ ಸಿಬ್ಬಂದಿಗೆ ಕೊರೊನಾ!

ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯವು ಸೆಪ್ಟೆಂಬರ್ 10 ರಿಂದ ನಡೆಯಲಿದೆ, ಆದರೆ ಈ ಪಂದ್ಯದ ಮೇಲೆ ಅಪಾಯದ ಕಾರ್ಮೋಡಗಳು ಸುಳಿದಾಡುತ್ತಿವೆ. 
ಕೊಹ್ಲಿ
ಕೊಹ್ಲಿ

ಲಂಡನ್: ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯವು ಸೆಪ್ಟೆಂಬರ್ 10 ರಿಂದ ನಡೆಯಲಿದೆ, ಆದರೆ ಈ ಪಂದ್ಯದ ಮೇಲೆ ಅಪಾಯದ ಕಾರ್ಮೋಡಗಳು ಸುಳಿದಾಡುತ್ತಿವೆ. 

ಮ್ಯಾಂಚೆಸ್ಟರ್‌ನಲ್ಲಿನ ಭಾರತೀಯ ತಂಡದ ತರಬೇತಿಯನ್ನು ಸಹಾಯಕ ಸಿಬ್ಬಂದಿ ಯೋಗೀಶ್ ಪರ್ಮಾರ್ ಕೊರೋನಾ ದೃಢ ಪಟ್ಟ ನಂತರ ಅಭ್ಯಾಸವನ್ನು ಸ್ಥಗಿತಗೊಳಿಸಲಾಯಿತು.

ಟೀಂ ಇಂಡಿಯಾದ ಮುಖ್ಯ ಕೋಚ್ ರವಿಶಾಸ್ತ್ರಿ, ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಮತ್ತು ಫಿಸಿಯೋ ನಿತಿನ್ ಪಟೇಲ್ ಈಗಾಗಲೇ ಕೋವಿಡ್-19 ಸೋಂಕಿನಿಂದ ಬಳಲುತ್ತಿದ್ದಾರೆ. ಈಗ ಮತ್ತೊಬ್ಬ ಸಹಾಯಕ ಸಿಬ್ಬಂದಿ ಕೊರೋನಾ ಸೋಂಕಿಗೆ ಒಳಗಾಗಿದ್ದು ಟೀಂ ಇಂಡಿಯಾಕ್ಕೆ ಒಳ್ಳೆಯ ಸುದ್ದಿಯಲ್ಲ.

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-1ರಿಂದ ಮುನ್ನಡೆ ಸಾಧಿಸಿದೆ. ಇನ್ನು ಅಂತಿಮ ಹಾಗೂ ಕೊನೆಯ ಟೆಸ್ಟ್ ಪಂದ್ಯ ಮ್ಯಾಂಚೆಸ್ಟರ್ ನಲ್ಲಿ ಆರಂಭವಾಗಬೇಕಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com