ಕೊನೆಯ ಪಂದ್ಯ ರದ್ದು: ಮರುದಿನಾಂಕ ನಿಗದಿ ಬಗ್ಗೆ ಬಿಸಿಸಿಐ ಪ್ರಸ್ತಾಪ; ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಭಾರತ ಕೈವಶ?
ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಹಾಗೂ ಕೊನೆಯ ಟೆಸ್ಟ್ ಪಂದ್ಯವನ್ನು ಕೊರೋನಾ ಭೀತಿಯಿಂದಾಗಿ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.
Published: 10th September 2021 03:38 PM | Last Updated: 11th September 2021 01:37 PM | A+A A-

ಟೀಂ ಇಂಡಿಯಾ
ಮ್ಯಾಂಚೆಸ್ಟರ್: ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಹಾಗೂ ಕೊನೆಯ ಟೆಸ್ಟ್ ಪಂದ್ಯವನ್ನು ಕೊರೋನಾ ಭೀತಿಯಿಂದಾಗಿ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.
ಟೀಂ ಇಂಡಿಯಾದ ಮುಖ್ಯ ಕೋಚ್ ರವಿಶಾಸ್ತ್ರಿ ಸೇರಿದಂತೆ ಹಲವು ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದರಿಂದ ಇಂದು ಮ್ಯಾಂಚೆಸ್ಟರ್ ನಲ್ಲಿ ನಡೆಯಬೇಕಿದ್ದ ಕೊನೆಯ ಟೆಸ್ಟ್ ಪಂದ್ಯವನ್ನು ರದ್ದು ಮಾಡಲಾಗಿದೆ.
ಇನ್ನು ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-1ರಿಂದ ಮುನ್ನಡೆ ಸಾಧಿಸಿರುವುದರಿಂದ ಟೆಸ್ಟ್ ಸರಣಿ ಟೀಂ ಇಂಡಿಯಾ ಕೈವಶವಾಗಲಿದೆ.
ಆದರೆ ಕೊನೆಯ ಟೆಸ್ಟ್ ಪಂದ್ಯ ತಾತ್ಕಾಲಿಕವಾಗಿ ರದ್ದಾಗಿರುವುದರಿಂದ ಇದೀಗ ಬಿಸಿಸಿಐ ಪಂದ್ಯಕ್ಕಾಗಿ ಮತ್ತೊಂದು ದಿನಾಂಕ ನಿಗದಿ ಮಾಡುವ ಪ್ರಸ್ತಾಪ ಇಟ್ಟಿದೆ. ಈ ಸಂಬಂಧ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಜೊತೆ ಚರ್ಚೆ ನಡೆಯಲಿದೆ. ಒಂದು ವೇಳೆ ಕೊನೆಯ ಪಂದ್ಯ ನಡೆಯದಿದ್ದರೆ ಟೀಂ ಇಂಡಿಯಾ ಟೆಸ್ಟ್ ಸರಣಿ ಗೆದ್ದ ತಂಡವಾಗಲಿದೆ.