ಸರಣಿ ರದ್ದುಪಡಿಸುವ ಮೂಲಕ ನ್ಯೂಜಿಲ್ಯಾಂಡ್ ಪಾಕಿಸ್ತಾನದ ಕ್ರಿಕೆಟ್ ಅನ್ನು ಕೊಲೆಗೈದಿದೆ: ಶೋಯಬ್ ಅಖ್ತರ್
ಉಗ್ರ ದಾಳಿ ಎಚ್ಚರಿಕೆ ಹಿನ್ನಲೆಯಲ್ಲಿ ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡ ಪಾಕಿಸ್ತಾನ ಪ್ರವಾಸವನ್ನು ರದ್ದುಗೊಳಿಸಿದ್ದು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಕ್ರಿಕೆಟಿಗ ಶೋಯಬ್ ಅಖ್ತರ್ ಪ್ರವಾಸ ರದ್ದುಗೊಳಿಸುವ ಮೂಲಕ ನ್ಯೂಜಿಲ್ಯಾಂಡ್ ಪಾಕಿಸ್ತಾನದ ಕ್ರಿಕೆಟ್ ಅನ್ನು ಕೊಲೆಗೈದಿದೆ ಎಂದು ಹೇಳಿದ್ದಾರೆ.
Published: 17th September 2021 11:09 PM | Last Updated: 17th September 2021 11:16 PM | A+A A-

ಶೋಯೆಬ್ ಅಖ್ತರ್
ಲಾಹೋರ್: ಉಗ್ರ ದಾಳಿ ಎಚ್ಚರಿಕೆ ಹಿನ್ನಲೆಯಲ್ಲಿ ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡ ಪಾಕಿಸ್ತಾನ ಪ್ರವಾಸವನ್ನು ರದ್ದುಗೊಳಿಸಿದ್ದು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಕ್ರಿಕೆಟಿಗ ಶೋಯಬ್ ಅಖ್ತರ್ ಪ್ರವಾಸ ರದ್ದುಗೊಳಿಸುವ ಮೂಲಕ ನ್ಯೂಜಿಲ್ಯಾಂಡ್ ಪಾಕಿಸ್ತಾನದ ಕ್ರಿಕೆಟ್ ಅನ್ನು ಕೊಲೆಗೈದಿದೆ ಎಂದು ಹೇಳಿದ್ದಾರೆ.
ರಾವಲ್ಪಿಂಡಿಯಲ್ಲಿ ಇಂದು ಆರಂಭವಾಗಬೇಕಿದ್ದ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಸೀಮಿತ ಓವರ್ ಗಳ ಕ್ರಿಕೆಟ್ ಸರಣಿಯನ್ನು 'ಭದ್ರತಾ ಎಚ್ಚರಿಕೆ' ಹಿನ್ನಲೆಯಲ್ಲಿ ನ್ಯೂಜಿಲೆಂಡ್ ಕ್ರಿಕೆಟ್ ಆಡಳಿತ ಮಂಡಳಿ ರದ್ದುಗೊಳಿಸಿದೆ. ತಮಗೆ ಭದ್ರತಾ ಎಚ್ಚರಿಕೆ ನೀಡಲಾಗಿದೆ ಮತ್ತು ಏಕಪಕ್ಷೀಯವಾಗಿ ಸರಣಿಯನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ತಿಳಿಸಿತ್ತು.
ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್, ನ್ಯೂಜಿಲ್ಯಾಂಡ್ ಪಾಕಿಸ್ತಾನದ ಕ್ರಿಕೆಟ್ ಅನ್ನು ಕೊಲೆಗೈದಿದೆ ಎಂದು ಟ್ವೀಟ್ ಮಾಡಿದ್ದಾರೆ.
ನ್ಯೂಜಿಲೆಂಡ್ ತಂಡ ಪಾಕಿಸ್ತಾನದ ವಿರುದ್ಧ ಮೂರು ಏಕದಿನ ಮತ್ತು ಐದು ಟಿ 20 ಪಂದ್ಯಗಳನ್ನು ಆಡಬೇಕಿತ್ತು. ರಾವಲ್ಪಿಂಡಿಯಲ್ಲಿ ಇಂದು ಮೊದಲ ಏಕದಿನ ಪಂದ್ಯ ಆಯೋಜನೆಯಾಗಿತ್ತು.
NZ just killed Pakistan cricket
— Shoaib Akhtar (@shoaib100mph) September 17, 2021