ನಾಳೆ ಪಾಕ್ ಗೆ ಹೋಗ್ತಿದ್ದೀನಿ ನನ್ನೊಂದಿಗೆ ಯಾರೆಲ್ಲಾ ಬರ್ತೀರಿ?: ನ್ಯೂಜಿಲ್ಯಾಂಡ್ ಸರಣಿ ರದ್ದು ಬಳಿಕ ಗೇಲ್ ಟ್ವೀಟ್
ಉಗ್ರ ದಾಳಿ ಎಚ್ಚರಿಕೆ ಹಿನ್ನಲೆಯಲ್ಲಿ ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡ ಪಾಕಿಸ್ತಾನ ಪ್ರವಾಸವನ್ನು ರದ್ದುಗೊಳಿಸಿರುವುದರ ಬಗ್ಗೆ ಕ್ರಿಕೆಟ್ ದಿಗ್ಗಜರು ಟ್ವೀಟ್ ಮಾಡುತ್ತಿದ್ದಾರೆ.
Published: 19th September 2021 03:40 PM | Last Updated: 19th September 2021 03:40 PM | A+A A-

ಕ್ರಿಸ್ ಗೇಲ್
ಉಗ್ರ ದಾಳಿ ಎಚ್ಚರಿಕೆ ಹಿನ್ನಲೆಯಲ್ಲಿ ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡ ಪಾಕಿಸ್ತಾನ ಪ್ರವಾಸವನ್ನು ರದ್ದುಗೊಳಿಸಿರುವುದರ ಬಗ್ಗೆ ಕ್ರಿಕೆಟ್ ದಿಗ್ಗಜರು ಟ್ವೀಟ್ ಮಾಡುತ್ತಿದ್ದಾರೆ.
ಈ ನಡುವೆ ವೆಸ್ಟ್ ಇಂಡೀಸ್ ತಂಡದ ಕ್ರಿಕೆಟಿಗ ಕ್ರಿಸ್ ಗೇಲ್, " ನಾನು ಪಾಕಿಸ್ತಾನಕ್ಕೆ ತೆರಳುತ್ತಿದ್ದೇನೆ, ನನ್ನ ಜೊತೆ ಯಾರು ಬರುತ್ತೀರಿ? ಎಂದು ಪ್ರಶ್ನಿಸಿದ್ದಾರೆ.
I’m going to Pakistan tomorrow, who coming with me?
— Chris Gayle (@henrygayle) September 18, 2021
ಈ ಟ್ವೀಟ್ ಗೆ ಹಲವು ಕ್ರೀಡಾಭಿಮಾನಿಗಳು ಹಾಗೂ ಪಾಕ್ ನ ಮಾಜಿ ಕ್ರಿಕೆಟಿಗರು ಪ್ರತಿಕ್ರಿಯೆ ನೀಡಿದ್ದಾರೆ. 2021ರ ಐಪಿಎಲ್ ನಲ್ಲಿ ಭಾಗವಹಿಸಲು ಕ್ರಿಸ್ ಗೇಲ್ ಪಂಜಾಬ್ ಕಿಂಗ್ಸ್ ತಂಡದ ಜೊತೆ ಅಭ್ಯಾಸದಲ್ಲಿ ನಿರತರಾಗಿದ್ದಾರೆ.
see u there legend
— Mohammad Amir (@iamamirofficial) September 18, 2021
ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ಅಧಿಕೃತ ಟ್ವಿಟರ್ ಖಾತೆಯಿಂದ ಗೇಲ್ ಟ್ವೀಟ್ ನ್ನು ರಿಟ್ವೀಟ್ ಮಾಡಿದೆ. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಆಮೀರ್ ಸಹ ಗೇಲ್ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ್ದು, ನಿಮ್ಮನ್ನು ಪಾಕಿಸ್ತಾನದಲ್ಲಿ ಭೇಟಿಯಾಗುತ್ತೇನೆ ಎಂದು ಹೇಳಿದ್ದಾರೆ.
ರಾವಲ್ಪಿಂಡಿಯಲ್ಲಿ ಸೆ.17 ರಂದು ಆರಂಭವಾಗಬೇಕಿದ್ದ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಸೀಮಿತ ಓವರ್ ಗಳ ಕ್ರಿಕೆಟ್ ಸರಣಿಯನ್ನು "ಭದ್ರತಾ ಎಚ್ಚರಿಕೆ"ಹಿನ್ನಲೆಯಲ್ಲಿ ನ್ಯೂಜಿಲೆಂಡ್ ಕ್ರಿಕೆಟ್ ಆಡಳಿತ ಮಂಡಳಿ ರದ್ದುಗೊಳಿಸಿತ್ತು. ತಮಗೆ ಭದ್ರತಾ ಎಚ್ಚರಿಕೆ ನೀಡಲಾಗಿದೆ ಮತ್ತು ಏಕಪಕ್ಷೀಯವಾಗಿ ಸರಣಿಯನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ತಿಳಿಸಿತ್ತು.