ಐಪಿಎಲ್ 2021: ರಿತುರಾಜ್ ಅಬ್ಬರ ಬ್ಯಾಟಿಂಗ್, ಮುಂಬೈಗೆ 157 ರನ್ ಗುರಿ!

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿದೆ. 
ಸಿಎಸ್ ಕೆ
ಸಿಎಸ್ ಕೆ

ದುಬೈ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿದೆ. 

ದುಬೈನಲ್ಲಿ ನಡೆಯುತ್ತಿರುವ ಐಪಿಎಲ್ ಮುಂದುವರೆದ ಪಂದ್ಯಾವಳಿಯ ಮೊದಲ ಪಂದ್ಯ ಚೆನ್ನೈ ಮತ್ತು ಮುಂಬೈ ನಡುವೆ ನಡೆಯುತ್ತಿದೆ. 

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಆರಂಭಿಕ ಆಘಾತ ಎದುರಿಸಿತು. ರಿತುರಾಜ್ ಗಾಯಕ್ವಾಡ್ ಭರ್ಜರಿ ಬ್ಯಾಟಿಂಗ್ ಮಾಡಿದ್ದು 88 ರನ್ ಬಾರಿಸಿದ್ದು ಇದರಿಂದಾಗಿ ಚೆನ್ನೈ ತಂಡ ಹೈದರಾಬಾದ್ ತಂಡಕ್ಕೆ ಸ್ಪರ್ಧಾತ್ಮಕ ಮೊತ್ತ ನೀಡುವಲ್ಲಿ ಯಶಸ್ವಿಯಾಗಿದೆ. 

ಚೆನ್ನೈ ಪರ ಸುರೇಶ್ ರೈನ್ 4, ಧೋನಿ 3, ರವೀಂದ್ರ ಜಡೇಜಾ 26, ಡ್ವೈಯ್ ಬ್ರಾವೋ 23 ರನ್ ಬಾರಿಸಿದ್ದಾರೆ. 

ಹೈದರಾಬಾದ್ ಪರ ಬೌಲಿಂಗ್ ನಲ್ಲಿ ಟ್ರೆಂಟ್ ಬೋಲ್ಟ್, ಆ್ಯಡಂ ಮಿಲ್ನೆ, ಜಸ್ ಪ್ರೀತ್ ಬುಮ್ರಾ ತಲಾ 2 ವಿಕೆಟ್ ಪಡೆದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com