ಕ್ಯಾಪ್ಟನ್ ಕೊಹ್ಲಿ ಮತ್ತೊಂದು ಶಾಕ್: 2021 ಐಪಿಎಲ್ ನಂತರ ಆರ್ ಸಿಬಿ ನಾಯಕ ಸ್ಥಾನಕ್ಕೆ ವಿರಾಟ್ ಗುಡ್ ಬೈ
ದುಬೈ: ಟೀಂಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಯಕತ್ವ ತ್ಯಜಿಸಿದ್ದ ಸುದ್ದಿ ಇನ್ನೂ ಹಸಿರಾಗಿರುವಂತೆಯೇ ಅಭಿಮಾನಿಗಳಿಗೆ ಮತ್ತೊಂದು ಶಾಕ್ ನೀಡಿದ್ದಾರೆ.
ಹೌದು.. ವಿರಾಟ್ ಕೊಹ್ಲಿ ಹಾಲಿ 2021 ಐಪಿಎಲ್ ಸೀಸನ್ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಸ್ಥಾನಕ್ಕೆ ಗುಡ್ ಬೈ ಹೇಳಲಿದ್ದಾರೆ.
ಈ ಬಗ್ಗೆ ಸ್ವತಃ ವಿರಾಟ್ ಕೊಹ್ಲಿ ಮಾಹಿತಿ ನೀಡಿದ್ದು, ಇಂಡಿಯನ್ ಪ್ರೀಮಿಯರ್ ಲೀಗ್ 2021 ರ ಋತುವಿನ ಅಂತ್ಯದ ನಂತರ ಆರ್ಸಿಬಿ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದಾರೆ.
ಆರ್‌ಸಿಬಿಯ ನಾಯಕನಾಗಿ ಇದು ನನ್ನ ಕೊನೆಯ ಐಪಿಎಲ್. ನನ್ನ ಕೊನೆಯ ಐಪಿಎಲ್ ಪಂದ್ಯವನ್ನು ಆಡುವವರೆಗೂ ನಾನು ಆರ್‌ಸಿಬಿ ಆಟಗಾರನಾಗಿ ಮುಂದುವರಿಯುತ್ತೇನೆ. ನನ್ನನ್ನು ನಂಬಿದ್ದಕ್ಕಾಗಿ ಮತ್ತು ನನ್ನನ್ನು ಬೆಂಬಲಿಸಿದ ಎಲ್ಲ ಆರ್‌ಸಿಬಿ ಅಭಿಮಾನಿಗಳಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಕೊಹ್ಲಿ ಆರ್‌ಸಿಬಿ ಟ್ವಿಟರ್ ಹ್ಯಾಂಡಲ್‌ನಲ್ಲಿ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ.
ಈ ಹಿಂದೆ ಯುಎಇಯಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ನಂತರ ಭಾರತದ ಟಿ-20 ನಾಯಕನ ಸ್ಥಾನ ತ್ಯಜಿಸುವುದಾಗಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಗುರುವಾರ ಘೋಷಿಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ