ಐಪಿಎಲ್ 2021: ಹಿಟ್ ಮ್ಯಾನ್ ರೋಹಿತ್ ಶರ್ಮಾ ಮತ್ತೊಂದು ದಾಖಲೆ

ಗುರುವಾರ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಮತ್ತೊಂದು ದಾಖಲೆ ಬರೆದಿದ್ದಾರೆ.
ರೋಹಿತ್ ಶರ್ಮಾ
ರೋಹಿತ್ ಶರ್ಮಾ

ಆಬುಧಾಬಿ: ಗುರುವಾರ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಮತ್ತೊಂದು ದಾಖಲೆ ಬರೆದಿದ್ದಾರೆ.

ಕೆಕೆಆರ್ ವಿರುದ್ಧದ ಪಂದ್ಯದಲ್ಲಿ 1 ಸಾವಿರ ರನ್ ಪೂರ್ಣಗೊಳಿಸಿದ ಬ್ಯಾಟ್ಸ್ ಮನ್ ಆಗಿ ಹೊರಹೊಮ್ಮಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ರೋಹಿತ್ ಆಡಿರಲಿಲ್ಲ. ಪರಿಣಾಮ ಮುಂಬೈ ತಂಡ ಸೋಲಿಗೆ ಶರಣಾಗಿತ್ತು. 

ಅಬುದಾಬಿಯಲ್ಲಿ ನಡೆಯುತ್ತಿರುವ ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಆಗಮಿಸಿದ ರೋಹಿತ್ ಶರ್ಮಾ,  ಬಿರುಸಿನ ಬ್ಯಾಟಿಂಗ್ ಮೂಲಕ ಗಮನ ಸೆಳೆದರು. ರೋಹಿತ್ ಶರ್ಮಾ 33 ರನ್ ಗಳಿಸಿದಾಗ ನರೈನ್ ಬೌಲಿಂಗ್ ನಲ್ಲಿ ಔಟಾದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com