ಟಿ20 ಕ್ರಿಕೆಟ್ ನಲ್ಲಿ 10 ಸಾವಿರ ರನ್ ಪೂರೈಸಿದ ದೇಶದ ಮೊದಲ ಆಟಗಾರ ವಿರಾಟ್ ಕೊಹ್ಲಿ!

ಟೀಂ ಇಂಡಿಯಾದ ಟಾಪ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಅವರ ಮುಡಿಗೆ ಮತ್ತೊಂದು ಕಿರೀಟ ದೊರಕಿದೆ. ಟಿ-20 ಕ್ರಿಕೆಟ್ ನಲ್ಲಿ 10 ಸಾವಿರ ರನ್ ಪೂರೈಸಿದ ಭಾರತದ ಪ್ರಥಮ ಹಾಗೂ ವಿಶ್ವದ ಐದನೇ ಆಟಗಾರನಾಗಿ ಹೊರಹೊಮ್ಮಿದ್ದಾರೆ. 
ಮುಂಬೈ ವಿರುದ್ಧ 51 ರನ್ ಗಳಿಸಿದ ವಿರಾಟ್ ಕೊಹ್ಲಿ
ಮುಂಬೈ ವಿರುದ್ಧ 51 ರನ್ ಗಳಿಸಿದ ವಿರಾಟ್ ಕೊಹ್ಲಿ

ದುಬೈ: ಟೀಂ ಇಂಡಿಯಾದ ಟಾಪ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಅವರ ಮುಡಿಗೆ ಮತ್ತೊಂದು ಕಿರೀಟ ದೊರಕಿದೆ. ಟಿ-20 ಕ್ರಿಕೆಟ್ ನಲ್ಲಿ 10 ಸಾವಿರ ರನ್ ಪೂರೈಸಿದ ಭಾರತದ ಪ್ರಥಮ ಹಾಗೂ ವಿಶ್ವದ ಐದನೇ ಆಟಗಾರನಾಗಿ ಹೊರಹೊಮ್ಮಿದ್ದಾರೆ. 

ಅಲ್ಲದೇ, ಯುನಿವರ್ಸಲ್ ಬಾಸ್ ಕ್ರಿಸ್ ಗೇಲ್, ಕಿರಾನ್ ಪೋಲಾರ್ಡ್, ಶೋಯಬ್ ಮಲ್ಲಿಕ್ ಮತ್ತು ಡೆವಿಡ್ ವಾರ್ನರ್ ಅವರನ್ನೊಳಗೊಂಡ ದಿಗ್ಗಜ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ಕೊಹ್ಲಿ ಸೇರ್ಪಡೆಯಾಗಿದ್ದಾರೆ. 

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ದಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಈ ಮಹತ್ವದ ಮೈಲುಗಲ್ಲು ಕ್ರಮಿಸಿದರು.

ಮುಂಬೈ ಇಂಡಿಯನ್ಸ್ ವೇಗಿ ಜಸ್ ಪ್ರೀತ್ ಬೂಮ್ರಾ ಅವರ ಬೌಲಿಂಗ್ ನಲ್ಲಿ ಸಿಕ್ಸರ್ ಎತ್ತುವುದರೊಂದಿಗೆ ಕೊಹ್ಲಿ ಈ ಸಾಧನೆ ಮಾಡಿದರು. ಕೊಹ್ಲಿ ಅವರ ಆಕರ್ಷಕ 51 ರನ್ ಗಳ ನೆರವಿನೊಂದಿಗೆ ಆರ್ ಸಿಬಿ ಗೆಲುವಿನ ನಗೆ ಬೀರಿತು.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com