ಇಂಗ್ಲೆಂಡ್ ಪ್ರವಾಸ: ಮಹಿಳಾ ಟೀಂ ಇಂಡಿಯಾ ಪ್ರಕಟಿಸಿದ ಬಿಸಿಸಿಐ, ಜೂಲನ್ ಗೋಸ್ವಾಮಿಗೆ ಅವಕಾಶ

ಇಂಗ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಪ್ರವಾಸಕ್ಕೆ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ. 
ಭಾರತ ಮಹಿಳಾ ತಂಡ
ಭಾರತ ಮಹಿಳಾ ತಂಡ
Updated on

ಇಂಗ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಪ್ರವಾಸಕ್ಕೆ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ. 

ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ತಂಡ ಮುಂದಿನ ತಿಂಗಳು ಸೀಮಿತ ಓವರ್‌ಗಳ ಸರಣಿಗಾಗಿ ಇಂಗ್ಲೆಂಡ್‌ಗೆ ಪ್ರವಾಸ ಕೈಗೊಳ್ಳಲಿದೆ. ಇನ್ನು ಅನುಭವಿ ವೇಗದ ಬೌಲರ್ ಜೂಲನ್ ಗೋಸ್ವಾಮಿ ತಂಡಕ್ಕೆ ಮರಳಿದ್ದು ಯುವ ವಿಕೆಟ್ ಕೀಪರ್ ಯಾಸ್ತಿಕಾ ಭಾಟಿಯಾ ಅವರನ್ನು ಟಿ20 ತಂಡದಿಂದ ಕೈಬಿಡಲಾಗಿದೆ.

ಇಂಗ್ಲೆಂಡ್ ಪ್ರವಾಸಕ್ಕೆ ಟೀಂ ಇಂಡಿಯಾ ತಂಡ

ಟಿ20 ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶೆಫಾಲಿ ವರ್ಮಾ, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಜೆಮಿಮಾ ರೋಡ್ರಿಗಸ್, ಸ್ನೇಹ ರಾಣಾ, ರೇಣುಕಾ ಠಾಕೂರ್, ಮೇಘನಾ ಸಿಂಗ್, ರಾಧಾ ಯಾದವ್, ಶಬಿನೇನಿ ಮೇಘನಾ, ತಾನಿಯಾ ಭಾಟಿಯಾ, ರಿಚಾ ಘೋಷ್, ರಾಜೇಶ್ವರಿ ಗಾಯಕ್ವಾಡ್, ಡಿ ಹೇಮಲತಾ, ಸಿಮ್ರಾನ್ ದಿಲ್ ಬಹದ್ದೂರ್, ಕಿರಣ್ ನವಗಿರೆ.

ಏಕದಿನ ತಂಡ: ಹರ್ಮನ್‌ಪ್ರೀತ್ ಕೌರ್(ನಾಯಕಿ), ಸ್ಮೃತಿ ಮಂಧಾನ(ಉಪನಾಯಕಿ), ಶೆಫಾಲಿ ವರ್ಮಾ, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಜೆಮಿಮಾ ರಾಡ್ರಿಗಸ್, ಸ್ನೇಹ ರಾಣಾ, ರೇಣುಕಾ ಠಾಕೂರ್, ಮೇಘನಾ ಸಿಂಗ್, ಶಬ್ಬಿನೇನಿ ಮೇಘನಾ, ತಾನಿಯಾ ಭಾಟಿಯಾ, ಯಾಸ್ತಿಕಾ ಭಾಟಿಯಾ, ರಾಜೇಶ್ವರಿ ಗಾಯಕ್ವಾಡ್, ಡಿ ಹೇಮಲತಾ, ಸಿಮ್ರಾನ್ ದಿಲ್ ಬಹದ್ದೂರ್, ಜೂಲನ್ ಗೋಸ್ವಾಮಿ, ಹರ್ಲೀನ್ ಡಿಯೋಲ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com