ಜಿಂಬಾಬ್ವೆ ವಿರುದ್ಧ 2ನೇ ಏಕದಿನ ಪಂದ್ಯ: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಟೀಂ ಇಂಡಿಯಾ

ಜಿಂಬಾಬ್ವೆ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಟೀಂ ಇಂಡಿಯಾ
ಟೀಂ ಇಂಡಿಯಾ

ಹರಾರೆ: ಇಲ್ಲಿ ಇಂದು ನಡೆಯುತ್ತಿರುವ ಜಿಂಬಾಬ್ವೆ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಇಂದಿನ ಪಂದ್ಯದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ದೀಪಕ್ ಚಹರ್ ಬದಲಿಗೆ ಶಾರ್ದೂಲ್ ಠಾಕೂರ್ ತಂಡ ಸೇರಿದ್ದಾರೆ. ಗುರುವಾರ ನಡೆದ ಆರಂಭಿಕ ಪಂದ್ಯದಲ್ಲಿ 10 ವಿಕೆಟ್ ಗಳ ಅಂತರದಿಂದ ಜಿಂಬಾಬ್ವೆ ತಂಡವನ್ನು ಸೋಲಿಸಿದ್ದ ಟೀಂ ಇಂಡಿಯಾ ಇಂದಿನ ಪಂದ್ಯದಲ್ಲಿಯೂ ಎದುರಾಳಿ ತಂಡವನ್ನು ಮಣಿಸಿ ಸರಣಿ ಕೈ ವಶ ಮಾಡಿಕೊಳ್ಳುವ ವಿಶ್ವಾಸದಲ್ಲಿದೆ. ಈ ಮಧ್ಯೆ ಜಿಂಬಾಬ್ವೆ ತಂಡದಲ್ಲಿಯೂ ಕೆಲವೊಂದು ಬದಲಾವಣೆ ಮಾಡಿಕೊಳ್ಳಲಾಗಿದೆ. 

ಟೀಂ ಇಂಡಿಯಾ ಇಂತಿದೆ: ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್, ಶುಭ್ ಮನ್ ಗಿಲ್, ಇಶಾನ್ ಕಿಶಾನ್, ದೀಪಕ್ ಹೂಡಾ, ಸಂಜು ಸ್ಯಾಮ್ಯನ್ಸ್ (ವಿಕೆಟ್ ಕೀಪರ್) ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಪ್ರಸಿದ್ದ್ ಕೃಷ್ಣ, ಮೊಹಮ್ಮದ್ ಸಿರಾಜ್.

ಜಿಂಬಾಬ್ವೆ ತಂಡ ಇಂತಿದೆ:  ರೆಗಿಸ್ ಚಕಬ್ವಾ (ನಾಯಕ) ಇನ್ನೋಸೆಂಟ್ ಕೈಯಾ, ತಕುದ್ಜ್ವಾನಾಶೆ ಕೈತಾನೋ, ವೆಸ್ಲಿ ಮಾಧೆವೆರೆ, ಸೀನ್ ವಿಲಿಯಮ್ಸ್, ಸಿಕಂದರ್ ರಜಾ, ರಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯಾಯುಚಿ, ತನಕಾ ಚಿವಾಂಗಾ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com