ಕಳಪೆ ಬ್ಯಾಟಿಂಗ್'ಗೆ ಬೆಲೆ ತೆತ್ತ ಭಾರತ: ವಿರಾಟ್ ಕೊಹ್ಲಿ ಅದ್ಭುತ್ ಕ್ಯಾಚ್ ವ್ಯರ್ಥ, ವಿಡಿಯೋ ವೈರಲ್!

ಫಿಟ್ನೆಸ್ ವಿಚಾರದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಸರಿಸಾಟಿ ಯಾರಿಲ್ಲ. ಇನ್ನು ತಂಡದಲ್ಲಿ ಅತ್ಯುತ್ತಮ ಫೀಲ್ಡರ್‌ಗಳಲ್ಲಿ ಒಬ್ಬರಾಗಲು ಇದೇ ಕಾರಣ. ಪ್ರತಿ ಪಂದ್ಯದಲ್ಲೂ ತಮ್ಮ ಫೀಲ್ಡಿಂಗ್ ಮೂಲಕ ಇದಕ್ಕೆ ಪುರಾವೆ ನೀಡುತ್ತಲೇ ಇರುತ್ತಾರೆ.
ಕೊಹ್ಲಿ
ಕೊಹ್ಲಿ
Updated on: 

ಫಿಟ್ನೆಸ್ ವಿಚಾರದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಸರಿಸಾಟಿ ಯಾರಿಲ್ಲ. ಇನ್ನು ತಂಡದಲ್ಲಿ ಅತ್ಯುತ್ತಮ ಫೀಲ್ಡರ್‌ಗಳಲ್ಲಿ ಒಬ್ಬರಾಗಲು ಇದೇ ಕಾರಣ.

ಪ್ರತಿ ಪಂದ್ಯದಲ್ಲೂ ತಮ್ಮ ಫೀಲ್ಡಿಂಗ್ ಮೂಲಕ ಇದಕ್ಕೆ ಪುರಾವೆ ನೀಡುತ್ತಲೇ ಇರುತ್ತಾರೆ. ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಅದ್ಭುತವಾಗಿ ಹಾರಿ ಕ್ಯಾಚ್ ಹಿಡಿಯುವ ಮೂಲಕ ಶಕೀಬ್-ಅಲ್-ಹಸನ್ ಔಟ್ ಮಾಡಿದರು. 

ಅದ್ಭುತವಾಗಿ ಬೌಲಿಂಗ್ ಮಾಡಿ 5 ವಿಕೆಟ್ ಪಡೆದಿದ್ದ ಶಕೀಬ್ ಅಲ್ ಹಸನ್ ಬ್ಯಾಟಿಂಗ್‌ನಲ್ಲಿಯೂ ಭಾರತೀಯ ಬೌಲರ್‌ಗಳನ್ನು ದಂಡಿಸಲು ಮುಂದಾಗಿದ್ದರು. ಆದರೆ ಶಕೀಬ್ 38 ಎಸೆತಗಳಲ್ಲಿ 29 ರನ್ ಗಳಿಸಿ ಆಡುತ್ತಿದ್ದಾಗ ವಾಷಿಂಗ್ಟನ್ ಸುಂದರ್ ಎಸೆತದಲ್ಲಿ ವಿರಾಟ್ ಕೊಹ್ಲಿಗೆ ಕ್ಯಾಚ್ ನೀಡಿ ಪೆವಿಲಿಯನ್ ಗೆ ಮರಳಿದರು. ಇನ್ನು ವಿರಾಟ್ ಕೊಹ್ಲಿ ಗಾಳಿಯಲ್ಲಿ ಹಾರಿ ಹಿಡಿದ ಕ್ಯಾಚ್ ವಿಡಿಯೋ ಇದೀಗ ವೈರಲ್ ಆಗಿದೆ.

ಮೀರ್‌ಪುರ್‌ ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 186 ರನ್ ಗಳ ಅಲ್ಪಮೊತ್ತಕ್ಕೆ ಆಲೌಟ್ ಆಯಿತು. ಭಾರತ ನೀಡಿದ 187 ರನ್ ಗಳ ಸಾಧಾರಣ ಮೊತ್ತ ಬೆನ್ನಟ್ಟಿದ ಬಾಂಗ್ಲಾದೇಶ 9 ವಿಕೆಟ್ ನಷ್ಟಕ್ಕೆ 187 ರನ್ ಬಾರಿಸಿ ಗೆಲುವಿನ ನಗೆ ಬೀರಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com