2ನೇ ಟೆಸ್ಟ್: 145 ರನ್ ಗುರಿ ಬೆನ್ನಟ್ಟಲು ತಿಣುಕಾಡುತ್ತಿರುವ ಭಾರತ, 45 ರನ್‌ಗೆ 4 ವಿಕೆಟ್ ಪತನ!

ಅತಿಥೇಯ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಗೆಲ್ಲಲು 145 ರನ್ ಗಳ ಅಲ್ಪಮೊತ್ತ ಸಿಕ್ಕಿದ್ದರೂ ಭಾರತ 45 ರನ್ ಗಳಿಗೆ ಪ್ರಮುಖ 4 ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ಟೀಂ ಇಂಡಿಯಾ
ಟೀಂ ಇಂಡಿಯಾ

ಮೀರ್ಪುರ್: ಅತಿಥೇಯ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಗೆಲ್ಲಲು 145 ರನ್ ಗಳ ಅಲ್ಪಮೊತ್ತ ಸಿಕ್ಕಿದ್ದರೂ ಭಾರತ 45 ರನ್ ಗಳಿಗೆ ಪ್ರಮುಖ 4 ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಬಾಂಗ್ಲಾದೇಶ 231 ರನ್ ಗಳಿಗೆ ಆಲೌಟ್ ಆಗಿದ್ದು ಈ ಮೂಲಕ ಭಾರತಕ್ಕೆ ಗೆಲ್ಲಲ್ಲು 145 ರನ್ ಗಳ ಅಲ್ಪಮೊತ್ತದ ಗುರಿ ನೀಡಿತ್ತು. ಈ ರನ್ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಕೆಎಲ್ ರಾಹುಲ್ 2, ಶುಭ್ಮನ್ ಗಿಲ್ 7, ಚೇತೇಶ್ವರ ಪೂಜಾರ 6 ಹಾಗೂ ವಿರಾಟ್ ಕೊಹ್ಲಿ 1 ರನ್ ಗಳಿಗೆ ಔಟಾಗಿದ್ದಾರೆ. 

ಇನ್ನು ಅಕ್ಷರ್ ಪಟೇಲ್ ಅಜೇಯ 26 ರನ್ ಹಾಗೂ ಜಯದೇವ್ ಉನದ್ಕತ್ ಅಜೇಯ 3 ರನ್ ಹೊಡೆದಿದ್ದು ನಾಲ್ಕನೇ ದಿನದಾಟವನ್ನು ಆರಂಭಿಸಲಿದ್ದಾರೆ. ಇನ್ನು ನಾಲ್ಕನೇ ದಿನದಾಟದಲ್ಲಿ ಭಾರತ ಗೆಲ್ಲಲು 100 ರನ್ ಗಳನ್ನು ಹೊಡೆಯಬೇಕಿದೆ.

ಮೀರ್ಪುರದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಬಾಂಗ್ಲಾದೇಶ 227 ರನ್ ಪೇರಿಸಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ 314 ರನ್ ಗಳಿಗೆ ಆಲೌಟ್ ಆಗುವ ಮೂಲಕ 87 ರನ್ ಗಳ ಮುನ್ನಡೆ ಸಾಧಿಸಿತು. 

ಮೂರನೇ ದಿನವಾದ ಇಂದು ಎರಡನೇ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ ಇದೀಗ 231 ರನ್ ಗಳಿಗೆ ಆಲೌಟ್ ಆಗಿದೆ. ಇನ್ನು ಭಾರತಕ್ಕೆ 145 ರನ್ ಗಳ ಅಲ್ಪಮೊತ್ತ ನೀಡಿತ್ತು.

ಭಾರತ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿದೆ. ಇನ್ನು ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾ ತಂಡವಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com