2ನೇ ಟೆಸ್ಟ್: ಟೀಂ ಇಂಡಿಯಾ ಗೆಲುವಿಗೆ 145 ರನ್ ಗಳ ಅಲ್ಪಮೊತ್ತದ ಗುರಿ ನೀಡಿದ ಬಾಂಗ್ಲಾ

ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಬಾಂಗ್ಲಾದೇಶ 231 ರನ್ ಗಳಿಗೆ ಆಲೌಟ್ ಆಗಿದ್ದು ಈ ಮೂಲಕ ಭಾರತಕ್ಕೆ ಗೆಲ್ಲಲ್ಲು 145 ರನ್ ಗಳ ಅಲ್ಪಮೊತ್ತದ ಗುರಿ ನೀಡಿದೆ. 
ಟೀಂ ಇಂಡಿಯಾ
ಟೀಂ ಇಂಡಿಯಾ

ಮೀರ್ಪುರ್: ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಬಾಂಗ್ಲಾದೇಶ 231 ರನ್ ಗಳಿಗೆ ಆಲೌಟ್ ಆಗಿದ್ದು ಈ ಮೂಲಕ ಭಾರತಕ್ಕೆ ಗೆಲ್ಲಲ್ಲು 145 ರನ್ ಗಳ ಅಲ್ಪಮೊತ್ತದ ಗುರಿ ನೀಡಿದೆ. 

ಮೀರ್ಪುರದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಬಾಂಗ್ಲಾದೇಶ 227 ರನ್ ಪೇರಿಸಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ 314 ರನ್ ಗಳಿಗೆ ಆಲೌಟ್ ಆಗುವ ಮೂಲಕ 87 ರನ್ ಗಳ ಮುನ್ನಡೆ ಸಾಧಿಸಿತು. 

ಮೂರನೇ ದಿನವಾದ ಇಂದು ಎರಡನೇ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ ಇದೀಗ 231 ರನ್ ಗಳಿಗೆ ಆಲೌಟ್ ಆಗಿದೆ. ಇನ್ನು ಭಾರತಕ್ಕೆ 145 ರನ್ ಗಳ ಅಲ್ಪಮೊತ್ತ ನೀಡಿದೆ. ಇನ್ನು ಮೂರನೇ ದಿನದಾಟ ಮುಕ್ತಾಯವಾಗಲು 25 ಓವರ್ ಗಳ ಬಾಕಿ ಇರುವುದರಿಂದ ಇಂದೇ ಭಾರತಕ್ಕೆ ಪಂದ್ಯ ಗೆಲ್ಲುವ ಅವಕಾಶವಿದೆ. 

ಬಾಂಗ್ಲಾದೇಶ ವಿರುದ್ಧ ಎರಡು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ ಮೊದಲ ಟೆಸ್ಟ್ ಪಂದ್ಯ ಗೆದ್ದಿದ್ದು ಈ ಪಂದ್ಯವನ್ನು ಗೆಲ್ಲುವ ಸಾಧ್ಯತೆಗಳು ಹೆಚ್ಚಿದೆ. 

ಭಾರತ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿದೆ. ಇನ್ನು ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾ ತಂಡವಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com