ಬಾಂಗ್ಲಾ ವಿರುದ್ಧ 2ನೇ ಟೆಸ್ಚ್ ಗೆಲುವು: ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಟೀಂ ಇಂಡಿಯಾ 2ನೇ ಸ್ಛಾನ ಮತ್ತಷ್ಟು ಭದ್ರ, ಫೈನಲ್ ಗೆ ಸನಿಹ

ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಗೆಲುವಿನ ಬಳಿಕ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಭಾರತದ ಸ್ಥಾನ ಮತ್ತಷ್ಟು ಭದ್ರವಾಗಿದೆ.
ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಟೀಂ ಇಂಡಿಯಾ 2ನೇ ಸ್ಛಾನ
ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಟೀಂ ಇಂಡಿಯಾ 2ನೇ ಸ್ಛಾನ

ದುಬೈ: ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಗೆಲುವಿನ ಬಳಿಕ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಭಾರತದ ಸ್ಥಾನ ಮತ್ತಷ್ಟು ಭದ್ರವಾಗಿದೆ.

ಹೌದು.. ಇಂದು ಢಾಕಾದಲ್ಲಿ ಮುಕ್ತಾಯಗೊಂಡ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 3 ವಿಕೆಟ್ ಗಳ ವಿರೋಚಿತ ಗೆಲುವು ಸಾಧಿಸಿದ್ದು, ಈ ಗೆಲುವಿನ ಮೂಲಕ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ತನ್ನ 2ನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ. ಮೊದಲ ಟೆಸ್ಟ್ ಪಂದ್ಯದ ಗೆಲುವಿನ ಬಳಿಕ ಪಟ್ಟಿಯಲ್ಲಿ 87 ಅಂಕಗಳೊಂದಿಗೆ 2ನೇ ಸ್ಥಾನಕ್ಕೇರಿತ್ತು. ಇದೀಗ 2ನೇ ಪಂದ್ಯದಲ್ಲೂ ಗೆಲುವು ಸಾಧಿಸಿ ತನ್ನ ಅಂಕಗಳಿಕೆಯನ್ನು 12 ಅಂಕಗಳಷ್ಟು ಏರಿಕೆ ಮಾಡಿಕೊಂಡು ತನ್ನ ಗಳಿಕೆಯನ್ನು 99ಕ್ಕೆ ಏರಿಕೆ ಮಾಡಿಕೊಂಡಿದೆ. ಆ ಮೂಲಕ ಪಟ್ಟಿಯಲ್ಲಿ ತನ್ನ 2ನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ. ಆ ಮೂಲಕ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಫೈನಲ್ ಗೇರುವ ಅವಕಾಶಕ್ಕೆ ಮತ್ತಷ್ಟು ಸನಿಹವಾಗಿದೆ.

ಇನ್ನು ಪಟ್ಟಿಯಲ್ಲಿ ಆಡಿರುವ 13 ಪಂದ್ಯಗಳ ಪೈಕಿ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಆಸ್ಟ್ರೇಲಿಯಾ 120 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದೆ.  ಆಡಿರುವ 14 ಪಂದ್ಯಗಳ ಪೈಕಿ 8 ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿ 99 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ. ಆಡಿರುವ 11 ಪಂದ್ಯಗಳ ಪೈಕಿ 6 ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಸಾಧಿಸಿ 72 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. 

ಉಳಿದಂತೆ  ಹಾಲಿ ಚಾಂಪಿಯನ್ ನ್ಯೂಜಿಲೆಂಡ್ ತಂಡ 9 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿ 28 ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದೆ.

(WTC 2021-2023 ರಲ್ಲಿ, ತಂಡಗಳು ಪ್ರತೀ ಗೆಲುವಿಗೆ 12 ಅಂಕಗಳನ್ನು ಪಡೆಯುತ್ತವೆ, ಒಂದು ಡ್ರಾಕ್ಕೆ 4 ಮತ್ತು ಟೈ (ಫಲಿತಾಂಶ ರಹಿತ)ಗಾಗಿ ತಲಾ 6 ಅಂಕಗಳನ್ನು ಪಡೆಯುತ್ತವೆ. ಲೀಡರ್‌ಬೋರ್ಡ್ ಅನ್ನು ನಿರ್ಧರಿಸಲು ಪಾಯಿಂಟ್‌ಗಳ ಶೇಕಡಾವಾರು ವ್ಯವಸ್ಥೆಯನ್ನು (PCT) ಬಳಸಲಾಗುತ್ತದೆ)

ಉಳಿದಂತೆ ನೂತನ ಪಟ್ಟಿ ಇಂತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com