ಎರಡನೇ ಟಿ20: ಇಂಗ್ಲೆಂಡ್ ಗೆ 171 ರನ್ ಗುರಿ ನೀಡಿದ ಭಾರತ

ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ 2 ನೇ ಟಿ20 ಪಂದ್ಯದಲ್ಲಿ ಭಾರತ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿದೆ. 
ಭಾರತ-ಇಂಗ್ಲೆಂಡ್ 2ನೇ ಟಿ20 ಪಂದ್ಯ
ಭಾರತ-ಇಂಗ್ಲೆಂಡ್ 2ನೇ ಟಿ20 ಪಂದ್ಯ

ಬರ್ಮಿಂಗ್ಹ್ಯಾಮ್: ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ 2 ನೇ ಟಿ20 ಪಂದ್ಯದಲ್ಲಿ ಭಾರತ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿದೆ. 

ಇಂಗ್ಲೆಂಡ್ ಗೆ 171 ರನ್ ಗಳ ಸ್ಪರ್ಧಾತ್ಮಕ ಗುರಿಯನ್ನು ಭಾರತ ನೀಡಿದೆ. 

ಟಾಸ್ ಗೆ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಿದ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ (20 ಎಸೆತಗಳಲ್ಲಿ 31 ರನ್) ಹಾಗೂ ರಿಷಭ್ ಪಂತ್ (15 ಎಸೆತಗಳಲ್ಲಿ 26 ರನ್) ಗಳಿಸಿ ಉತ್ತಮ ಆರಂಭ ನೀಡಿದರು. 

ಕೋಹ್ಲಿ ಆದಿಯಾಗಿ ನಂತರ ಬಂದ ಬ್ಯಾಟ್ಸ್ಮನ್ ಗಳು ಇಂಗ್ಲೆಂಡ್ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗಲಿಲ್ಲ. ಆದರೆ ರವೀಂದ್ರ ಜಡೇಜ 29 ಎಸೆತಗಳಲ್ಲಿ  ಅಜೇಯ 46 ರನ್ ಗಳನ್ನು ಗಳಿಸುವ ಮೂಲಕ ತಂಡ ಸ್ಪರ್ಧಾತ್ಮಕ ಸ್ಕೋರ್ ಗಳಿಸಲು ನೆರವಾದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com