ಭಾರತ vs ವಿಂಡೀಸ್: ಸರಣಿ ಗೆಲುವಿನತ್ತ ಟೀಂ ಇಂಡಿಯಾ ಚಿತ್ತ, ದಾಖಲೆ ಹೊಸ್ತಿಲಲ್ಲಿ ಭಾರತ ತಂಡ
ಕ್ವೀನ್ಸ್ ಪಾರ್ಕ್ ಓವಲ್: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯವನ್ನಾಡುತ್ತಿರುವ ಭಾರತ ತಂಡ ದಾಖಲೆ ಹೊಸ್ತಿಲಲ್ಲಿ ನಿಂತಿದ್ದು, ಈ ಪಂದ್ಯವನ್ನು ಗೆದ್ದರೆ ಭಾರತ ಸರಣಿಯನ್ನು ಕೈವಶ ಮಾಡಿಕೊಳ್ಳುವುದಷ್ಟೇ ಅಲ್ಲದೇ ಕ್ರಿಕೆಟ್ ಇತಿಹಾಸದ ಅಪರೂಪದ ದಾಖಲೆಯೊಂದನ್ನು ನಿರ್ಮಾಣ ಮಾಡಲಿದೆ.
ಇಂದಿನ ಪಂದ್ಯದಲ್ಲಿ ಭಾರತ ಗೆದ್ದರೆ ಇಲ್ಲಿ ಸರಣಿ ಗೆಲ್ಲುವ ಸಾಧ್ಯತೆ ಇದೆ. ಹೀಗಾದರೆ ಭಾರತದ ಖಾತೆಗೆ ಸೂಪರ್ ದಾಖಲೆ ಸೇರ್ಪಡೆಯಾಗಲಿದೆ. ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಗೆಲುವಿನೊಂದಿಗೆ ಅದೇ ತಂಡದ ವಿರುದ್ಧ ಸತತ ದ್ವಿಪಕ್ಷೀಯ ಏಕದಿನ ಸರಣಿ ಗೆಲುವು ಸಾಧಿಸಿದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಇಲ್ಲಿಯವರೆಗೆ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಸತತ 11 ಏಕದಿನ ಸರಣಿಗಳನ್ನು ಗೆದ್ದಿದೆ. ಪಾಕಿಸ್ತಾನವು ಜಿಂಬಾಬ್ವೆ ವಿರುದ್ಧ ಸತತ 11 ಏಕದಿನ ಸರಣಿಗಳನ್ನು ಗೆದ್ದಿದೆ. ಅದರೊಂದಿಗೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಈ ದಾಖಲೆಯಲ್ಲಿ ಸರಿಸಮನಾಗಿದೆ. ಆದರೆ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಮತ್ತೊಂದು ಗೆಲುವು ಪಡೆದರೆ, ಭಾರತ ಸತತ 12 ಸರಣಿ ಗೆಲುವುಗಳೊಂದಿಗೆ ಈ ದಾಖಲೆಯನ್ನು ತನ್ನ ಹೆಸರಿನಲ್ಲಿ ಬರೆಯಲಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ