ಟೀಂ ಇಂಡಿಯಾ
ಕ್ರಿಕೆಟ್
3ನೇ ಟಿ20 ಪಂದ್ಯ: ಸತತ ಸೋಲಿನಿಂದ ಕಂಗೆಟ್ಟಿರುವ ಟೀಂ ಇಂಡಿಯಾ 5 ವಿಕೆಟ್ ನಷ್ಟಕ್ಕೆ 179 ರನ್!
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಟೀಂ ಇಂಡಿಯಾ ಮೂರನೇ ಟಿ20 ಪಂದ್ಯದಲ್ಲಿ179 ರನ್ ಪೇರಿಸಿದೆ.
ವಿಶಾಖಪಟ್ಟಣಂ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಟೀಂ ಇಂಡಿಯಾ ಮೂರನೇ ಟಿ20 ಪಂದ್ಯದಲ್ಲಿ179 ರನ್ ಪೇರಿಸಿದೆ.
ವಿಶಾಖಪಟ್ಟಂನಲ್ಲಿ ನಡೆಯುತ್ತಿರುವ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 179 ರನ್ ಪೇರಿಸಿದ್ದು ದಕ್ಷಿಣ ಆಫ್ರಿಕಾಗೆ 180 ರನ್ ಗಳ ಗುರಿ ನೀಡಿದೆ.
ಟೀಂ ಇಂಡಿಯಾ ಪರ ರಿತುರಾಜ್ ಗಾಯಕ್ವಾಡ್ 57, ಇಶಾನ್ ಕಿಶನ್ 54, ಶ್ರೇಯಸ್ ಅಯ್ಯರ್ 14, ಹಾರ್ದಿಕ್ ಪಾಂಡ್ಯ ಅಜೇಯ 31 ರನ್ ಬಾರಿಸಿದ್ದಾರೆ.
ದಕ್ಷಿಣ ಆಫ್ರಿಕಾ ಪರ ಬೌಲಿಂಗ್ ನಲ್ಲಿ ಡ್ವೈನ್ ಪ್ರಿಟೋರಿಯಸ್ 2, ರಬಾಡಾ, ಶಮ್ಸಿ ಮತ್ತು ಕೇಶವ್ ಮಹಾರಾಜ್ ತಲಾ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ