ಕ್ರಿಕೆಟ್

4ನೇ ಟಿ20 ಪಂದ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾಗೆ ಆಘಾತ: ಸರಣಿಯಿಂದ ಹೊರನಡೆದ ಸ್ಫೋಟಕ ಬ್ಯಾಟರ್!

4ನೇ ಟಿ20 ಪಂದ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾಗೆ ಆಘಾತ: ಸರಣಿಯಿಂದ ಹೊರನಡೆದ ಸ್ಫೋಟಕ ಬ್ಯಾಟರ್!
ಏಡನ್ ಮಾರ್ಕ್ರಾಮ್
Published On :

ನವದೆಹಲಿ: ಆತಿಥೇಯ ಟೀಂ ಇಂಡಿಯಾ ವಿರುದ್ಧದ ಟಿ20 ಸರಣಿಯ ನಾಲ್ಕನೇ ಪಂದ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾಗೆ ಆಘಾತ ಎದುರಾಗಿದ್ದು ಸ್ಫೋಟಕ ಬ್ಯಾಟರ್ ಸರಣಿಯಿಂದ ಹೊರನಡೆದಿದ್ದಾರೆ.

ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟರ್ ಏಡನ್ ಮಾರ್ಕ್ರಾಮ್ ಮುಂದಿನ ಎರಡು ಪಂದ್ಯದಿಂದ ಹೊರಗುಳಿದಿದ್ದಾರೆ. ಐದು ಪಂದ್ಯಗಳ ಸರಣಿಯ ಮೊದಲ ಮೂರು ಪಂದ್ಯಗಳಲ್ಲಿಯೂ ಮಾರ್ಕ್ರಾಮ್ ಆಡಿರಲಿಲ್ಲ. ಇದೀಗ ಮುಂದಿನ ಎರಡು ಪಂದ್ಯಗಳಲ್ಲಿಯೂ ಅವರು ಆಡಲು ಸಾಧ್ಯವಾಗುವುದಿಲ್ಲ.

ಮೊದಲ ಟಿ20 ಸರಣಿಗೂ ಮೊದಲು ಮಾರ್ಕ್ರಾಮ್ ಗೆ ಕೊರೋನಾ ಪಾಸಿಟಿವ್ ಬಂದಿರುವುದನ್ನು ಕ್ರಿಕೆಟ್ ದಕ್ಷಿಣ ಆಫ್ರಿಕಾ ಮಾಹಿತಿ ನೀಡಿತ್ತು. ನಂತರ ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಮಾರ್ಕ್ರಾಮ್ ಪಾಸಿಟಿವ್ ದೃಢಪಟ್ಟಿತ್ತು. ಹೀಗಾಗಿ ಅವರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಇದೀಗ ಅವರು ಶೀಘ್ರದಲ್ಲೇ ದೇಶಕ್ಕೆ ಮರಳಲಿದ್ದಾರೆ.

ಐದು ಪಂದ್ಯಗಳ ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಇನ್ನು ಜೂನ್ 17ರಂದು ನಡೆಯಲಿರುವ ನಾಲ್ಕನೇ ಪಂದ್ಯ ಸರಣಿ ನಿರ್ಣಾಯಕ ಪಂದ್ಯವಾಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.