ಕ್ರಿಕೆಟ್
ಬೆಂಗಳೂರಲ್ಲಿ ದಕ್ಷಿಣ ಆಫ್ರಿಕಾ vs ಕ್ರಿಕೆಟ್ ಪಂದ್ಯ: ಸಂಚಾರದಲ್ಲಿ ಬದಲಾವಣೆ
ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಐದನೇ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದೆ.
ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಐದನೇ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದೆ.
ಪಂದ್ಯದ ಸಂದರ್ಭದಲ್ಲಿ ಕ್ರೀಡಾಂಗಣದ ಸುತ್ತಮುತ್ತ ಭಾರಿ ಟ್ರಾಫಿಕ್ ಉಂಟಾಗುವ ಹಿನ್ನೆಲೆಯಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ವಾಹನಗಳಲ್ಲಿ ಬರುವುದರಿಂದ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸುಗಮ ವಾಹನ ಸಂಚಾರ ದೃಷ್ಟಿಯಿಂದ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 12-30ರವರೆಗೆ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.