ಮಾಲ್ಡೀವ್ಸ್ ನಲ್ಲಿ ರಜೆ ಮುಗಿಸಿಕೊಂಡು ಬಂದ ವಿರಾಟ್ ಕೊಹ್ಲಿಗೆ ಕೋವಿಡ್ ಪಾಸಿಟಿವ್

ಜುಲೈ ನಿಂದ ಆರಂಭವಾಗುವ ಇಂಗ್ಲೆಂಡ್ ವಿರುದ್ಧದ ಪಂದ್ಯಗಳಿಗೆ ಭಾರತ ಸಿದ್ಧತೆಯಲ್ಲಿರುವಾಗಲೇ ಟೀಂ ಇಂಡಿಯಾಗೆ ಕೋವಿಡ್ ಕಾಡಲು ಶುರು ಮಾಡಿದೆ.  ಆರ್ ಅಶ್ವಿನ್ ಬೆನ್ನಲ್ಲೇ ವಿರಾಟ್ ಕೊಹ್ಲಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Updated on

ನವದೆಹಲಿ: ಜುಲೈ ನಿಂದ ಆರಂಭವಾಗುವ ಇಂಗ್ಲೆಂಡ್ ವಿರುದ್ಧದ ಪಂದ್ಯಗಳಿಗೆ ಭಾರತ ಸಿದ್ಧತೆಯಲ್ಲಿರುವಾಗಲೇ ಟೀಂ ಇಂಡಿಯಾಗೆ ಕೋವಿಡ್ ಕಾಡಲು ಶುರು ಮಾಡಿದೆ.  ಆರ್ ಅಶ್ವಿನ್ ಬೆನ್ನಲ್ಲೇ ವಿರಾಟ್ ಕೊಹ್ಲಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂದು ವರದಿಯಾಗಿದೆ. ಈ ಮೂಲಕ ಜುಲೈ 1-5 ರಿಂದ ಬರ್ಮಿಂಗ್‌ಹ್ಯಾಮ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಮರು ನಿಗದಿಪಡಿಸಲಾದ ಟೆಸ್ಟ್ ಗೆ ಕೋವಿಡ್ ಅಡ್ಡಿಯಾಗಿದೆ.

ಕೋವಿಡ್ ನಿಂದಾಗಿ ಹಿರಿಯ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ತಮ್ಮ ತಂಡದೊಂದಿಗೆ ಯುಕೆಗೆ ಪ್ರಯಾಣಿಸಲು ನಿರಾಕರಿಸಿದರೆ, ಕಳೆದ ವಾರ ತಂಡವು ಲಂಡನ್‌ಗೆ ಆಗಮಿಸಿದ ನಂತರ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಕೋವಿಡ್ -19 ಸೋಂಕಿಗೆ ಒಳಗಾಗಿದ್ದಾರೆ ಎಂದು  ತಿಳಿದು ಬಂದಿದೆ. ಮಾಲ್ಡೀವ್ಸ್ ನಿಂದ ರಜೆ ಮುಗಿಸಿಕೊಂಡು ಬಂದ ವಿರಾಟ್ ಕೊಹ್ಲಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆಂದು ವರದಿಯಾಗಿದೆ.

ಜುಲೈ 1 ರಿಂದ 5 ರವರೆಗೆ ಭಾರತ ತಂಡ ಬರ್ಮಿಂಗ್‌ಹ್ಯಾಮ್‌ನ ಎಡ್ಜ್ ಬಾಸ್ಟನ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ಆಡಲಿದೆ. ಕೋವಿಡ್ ನಿಂದ ಸ್ಥಗಿತಗೊಂಡಿದ್ದ ಈ ಪಂದ್ಯವನ್ನು ಮರುನಿಗದಿ ಮಾಡಲಾಗಿದೆ. ಸದ್ಯ ಭಾರತ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com