ಮುಂಬೈ: ಐದನೇ ಟೆಸ್ಟ್ ಬಳಿಕ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಮತ್ತು ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭಾರತ ತಂಡವನ್ನು ಪ್ರಕಟಿಸಿದ್ದು, ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಮೊದಲ ಟಿ20 ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ.
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಜುಲೈ 7 ರಿಂದ ಆರಂಭವಾಗಲಿದ್ದು, ಜುಲೈ 12 ರಿಂದ ಏಕದಿನ ಪಂದ್ಯ ನಡೆಯಲಿದೆ.
ಮೊದಲ ಟಿ20 ಪಂದ್ಯಕ್ಕೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್‌ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶದೀಪ್ ಸಿಂಗ್, ಉಮ್ರಾನ್ ಮಲಿಕ್.
2ನೇ ಮತ್ತು 3ನೇ ಟಿ20 ಪಂದ್ಯಗಳಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (ವಿಕೆಟ್‌ಕೀಪರ್), ರಿಷಭ್ ಪಂತ್ (ವಿಕೆಟ್‌ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಜಸ್‌ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್.
ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್‌ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದುಲ್ ಠಾಕೂರ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಜಸ್‌ಪ್ರೀತ್ ಬುಮ್ರಾ, ಪ್ರಸಿಧ್ ಶಾಮಿ ಕೃಷ್ಣ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.
Advertisement