ಟಿ20 ವಿಶ್ವಕಪ್: ಜಿಂಬಾಬ್ವೆ ವಿರುದ್ಧ ನೆದರ್ಲೆಂಡ್ ಗೆ 5 ವಿಕೆಟ್ ಭರ್ಜರಿ ಜಯ

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಗ್ರೂಪ್ 2 ನ ಮೊದಲ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ನೆದರ್ಲೆಂಡ್ ಗೆ 5 ವಿಕೆಟ್ ಭರ್ಜರಿ ಜಯ ಸಾಧಿಸಿದೆ.
ನೆದರ್ಲೆಂಡ್ ಗೆ 5 ವಿಕೆಟ್ ಭರ್ಜರಿ ಜಯ
ನೆದರ್ಲೆಂಡ್ ಗೆ 5 ವಿಕೆಟ್ ಭರ್ಜರಿ ಜಯ
Updated on: 

ಅಡಿಲೇಡ್: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಗ್ರೂಪ್ 2 ನ ಮೊದಲ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ನೆದರ್ಲೆಂಡ್ ಗೆ 5 ವಿಕೆಟ್ ಭರ್ಜರಿ ಜಯ ಸಾಧಿಸಿದೆ.

ಜಿಂಬಾಬ್ವೆ ನೀಡಿದ್ದ 118 ರನ್‌ಗಳ ಸಾಧಾರಣ ಗುರಿಯನ್ನು ಕೇವಲ 5 ವಿಕೆಟ್ ಕಳೆದುಕೊಂಡು ಇನ್ನೂ 12 ಎಸೆತಗಳು ಬಾಕಿ ಇರುವಂತೆಯೇ ನೆದರ್ಲ್ಯಾಂಡ್ಸ್ ತಂಡ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ನೆದರ್ಲ್ಯಾಂಡ್ಸ್ ತಂಡ ಸೂಪರ್ 12 ಹಂತದಲ್ಲಿ ತನ್ನ ಗೆಲುವಿನ ಖಾತೆ ತೆರೆದಿದೆ. ಇನ್ನೊಂದೆಡೆ ಈ ಸೋಲಿನೊಂದಿಗೆ ಜಿಂಬಾಬ್ವೆ ತಂಡದ ಸೆಮೀಸ್‌  ಕನಸು ಬಹುತೇಕ ಭಗ್ನವಾಗಿದೆ. 

ಅಡಿಲೇಡ್ ಓವೆಲ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಜಿಂಬಾಬ್ವೆ ನೀಡಿದ್ದ ಸಾಧಾರಣ ಗುರಿ ಬೆನ್ನತ್ತಿದ ನೆದರ್ಲೆಂಡ್ ತಂಡವು ಒ'ಡೌಡ್-ಕೂಪರ್ ಅಮೋಘ ಜೊತೆಯಾಟದ ನೆರವಿನಿಂದ ಜಿಂಬಾಬ್ವೆ ವಿರುದ್ಧ 5 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತು. ಸಾಧಾರಣ ಗುರಿ ಬೆನ್ನು ಹತ್ತಿದ ನೆದರ್ಲೆಂಡ್ ತಂಡ ಆರಂಭದಲ್ಲೇ ಆಘಾತ ಎದುರಿಸಿತು. ಆರಂಭಿಕ ಆಟಗಾರ ಸ್ಟಿಫನ್ ಮೈಬರ್ಗ್ ಕೇವಲ 8 ರನ್ ಬಾರಿಸಿ ಮುಜರಬಾನಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು. ನೆದರ್‌ಲೆಂಡ್ಸ್ ತಂಡವು 17 ರನ್ ಗಳಿಸುವಷ್ಟರಲ್ಲಿ ಆರಂಭಿಕ ಬ್ಯಾಟರ್ ಸ್ಟಿಫನ್ ವಿಕೆಟ್ ಕಳೆದುಕೊಂಡಿತು.

ಆರಂಭದಲ್ಲೇ ಸ್ಟಿಫನ್ ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ನೆದರ್‌ಲೆಂಡ್ಸ್ ತಂಡಕ್ಕೆ ಎರಡನೇ ವಿಕೆಟ್‌ಗೆ ಟಾಮ್ ಕೂಪರ್ ಹಾಗೂ ಮ್ಯಾಕ್ಸ್‌ ಒ'ಡೌಡ್‌ ಅರ್ಧಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಎರಡನೇ ವಿಕೆಟ್‌ಗೆ ಈ ಜೋಡಿ 73 ರನ್‌ಗಳ ಜತೆಯಾಟವಾಡುವ ಮೂಲಕ ಆಸರೆಯಾದರು. ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಟಾಮ್ ಕೂಪರ್ ಕೇವಲ 29 ಎಸೆತಗಳಲ್ಲಿ 2 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ ಆಕರ್ಷಕ 32 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಆಕರ್ಷಕ ಬ್ಯಾಟಿಂಗ್ ನಡೆಸಿದ ಮ್ಯಾಕ್ ಒ ಡೌಡ್ 47 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 52 ರನ್ ಬಾರಿಸುವ ಮೂಲಕ ನೆದರ್‌ಲೆಂಡ್ಸ್‌ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com