ಟಿ20 ವಿಶ್ವಕಪ್: ಆಫ್ರಿಕಾ ವಿರುದ್ಧ ಪಾಕಿಸ್ತಾನಕ್ಕೆ ಜಯ, ಭಾರತಕ್ಕೆ ಟೆನ್ಷನ್ ತಂದ ಬಾಬರ್ ಅಜಂ ಪಡೆಯ ನೆಟ್ ರನ್ ರೇಟ್!!

ಟಿ20 ವಿಶ್ವಕಪ್ ಟೂರ್ನಿ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಇಷ್ಟು ದಿನ ಟೂರ್ನಿಯಿಂದ ಬಹುತೇಕ ಔಟ್ ಆಗಿದ್ದ ಪಾಕಿಸ್ತಾನ ತಂಡ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಮತ್ತೆ ಸೆಮೀಸ್ ರೇಸ್ ಗೆ ಆಗಮಿಸಿದ್ದಲ್ಲದೇ ಭಾರತೀಯ ಅಭಿಮಾನಿಗಳ ಪಾಲಿಗೆ ಹೊಸ ಟೆನ್ಶನ್ ಗೆ ಕಾರಣವಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಸಿಡ್ನಿ: ಟಿ20 ವಿಶ್ವಕಪ್ ಟೂರ್ನಿ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಇಷ್ಟು ದಿನ ಟೂರ್ನಿಯಿಂದ ಬಹುತೇಕ ಔಟ್ ಆಗಿದ್ದ ಪಾಕಿಸ್ತಾನ ತಂಡ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಮತ್ತೆ ಸೆಮೀಸ್ ರೇಸ್ ಗೆ ಆಗಮಿಸಿದ್ದಲ್ಲದೇ ಭಾರತೀಯ ಅಭಿಮಾನಿಗಳ ಪಾಲಿಗೆ ಹೊಸ ಟೆನ್ಶನ್ ಗೆ ಕಾರಣವಾಗಿದೆ.

ಹೌದು.. ಇಂದು ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ತಂಡ 33 ರನ್ (ಡಕ್ವರ್ತ್ ಲೂಯಿಸ್ ನಿಯಮದನ್ವಯ) ಅಂತರದ ಭರ್ಜರಿ ಜಯ ಸಾಧಿಸಿದೆ. ಕೇವಲ ಗೆಲುವು ಮಾತ್ರವಲ್ಲದೇ ಪಾಕಿಸ್ತಾನ ತಂಡದ ನೆಟ್ ರನ್ ರೇಟ್ ಅನ್ನೂ ಕೂಡ ಈ ಗೆಲುವು ಬದಲಿಸಿದ್ದು, ಇದೀಗ ಪಾಕಿಸ್ತಾನ ತಂಡ ಅಂಕ ಪಟ್ಟಿಯಲ್ಲಿ ಏಕಾಏಕಿ 3ನೇ ಸ್ಥಾನಕ್ಕೆ ಜಿಗಿಯುವಂತೆ ಮಾಡಿದೆ. ಇಂದಿನ ಭರ್ಜರಿ ಗೆಲುವಿನೊಂದಿಗೆ ಪಾಕಿಸ್ತಾನದ ನೆಟ್ ರನ್ ರೇಟ್ +1.117ಕ್ಕೆ ಏರಿಕೆಯಾಗಿದ್ದು, ಇದೇ ಕಾರಣಕ್ಕೆ 4 ಅಂಕಗಳ ಹೊರತಾಗಿಯೂ ನೆಟ್ ರನ್ ರೇಟ್ ಆಧಾರದಲ್ಲಿ 3ನೇ ಸ್ಥಾನಕ್ಕೇರಿದೆ. 3ನೇ ಸ್ಥಾನದಲ್ಲಿದ್ದ ಬಾಂಗ್ಲಾದೇಶ -1.276ನೆಟ್ ರನ್ ರೇಟ್ ನೊಂದಿಗೆ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. 

ಅಂತೆಯೇ ತನ್ನ ಸೆಮೀಸ್ ಆಸೆಯನ್ನು ಪಾಕಿಸ್ತಾನ ಜೀವಂತವಾಗಿರಿಸಿಕೊಂಡಿದ್ದು, ಭಾರತ ತಂಡದ ಒಂದೇ ಒಂದು ತಪ್ಪು ಹೆಜ್ಜೆ ಪಾಕಿಸ್ತಾನಕ್ಕೆ ಸೆಮೀಸ್ ಹಾದಿಯನ್ನು ಸುಗಮಗೊಳಿಸಲಿದೆ.

ಭಾರತಕ್ಕೆ ಹೊಸ ಟೆನ್ಶನ್
ಭಾರತ ಸೆಮಿಫೈನಲ್ ತಲುಪಬೇಕಾದರೆ ಜಿಂಬಾಬ್ವೆ ವಿರುದ್ಧದ ಅಂತಿಮ ಪಂದ್ಯದಲ್ಲಿ ಗೆಲ್ಲಲೇಬೇಕು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ ಎರಡನೇ ಗುಂಪಿನಲ್ಲಿ ಅಗ್ರಸ್ಥಾನ ಪಡೆದು ಸೆಮಿಫೈನಲ್ ತಲುಪಲಿದೆ. ಆದರೆ ಜಿಂಬಾಬ್ವೆ ಟೀಂ ಇಂಡಿಯಾವನ್ನು ಸೋಲಿಸಿದರೆ, ಭಾರತವು ಸೆಮಿಫೈನಲ್ ತಲುಪಲು ಬಾಂಗ್ಲಾದೇಶ, ಪಾಕಿಸ್ತಾನ ಅಥವಾ ನೆದರ್ಲ್ಯಾಂಡ್ಸ್ ದಕ್ಷಿಣ ಆಫ್ರಿಕಾವನ್ನು ಸೋಲಿಸಬೇಕಾಗುತ್ತದೆ. 

ಬಾಬರ್ ಪಡೆಯ ನೆಟ್ ರನ್ ರೇಟ್
ಒಂದು ವೇಳೆ ದಕ್ಷಿಣ ಆಫ್ರಿಕಾ ನೆದರ್ಲೆಂಡ್ಸ್ ತಂಡವನ್ನು ಸೋಲಿಸಿದರೆ, ಭಾರತವು ಜಿಂಬಾಬ್ವೆ ವಿರುದ್ಧ ಸೋತರೆ ಮತ್ತು ಪಾಕಿಸ್ತಾನವು ಬಾಂಗ್ಲಾದೇಶವನ್ನು ಸೋಲಿಸಿದರೆ, ದಕ್ಷಿಣ ಆಫ್ರಿಕಾ 7 ಅಂಕಗಳನ್ನು ಹೊಂದಿರುತ್ತದೆ. ಭಾರತ-ಪಾಕಿಸ್ತಾನ ತಲಾ 6 ಅಂಕಗಳನ್ನು ಹೊಂದಿರುತ್ತದೆ. ಪ್ರಸ್ತುತ, ಪಾಯಿಂಟ್ ಪಟ್ಟಿಯಲ್ಲಿ ಭಾರತಕ್ಕಿಂತ ಪಾಕಿಸ್ತಾನದ ನೆಟ್ ರನ್ ರೇಟ್ ಹೆಚ್ಚಾಗಿದೆ. ಇನ್ನುಳಿದ ಪಂದ್ಯದಲ್ಲಿ ಭಾರತ ಸೋತರೆ ಮತ್ತು ಪಾಕಿಸ್ತಾನ ಬಾಂಗ್ಲಾದೇಶವನ್ನು ಸೋಲಿಸಿದರೆ, ಪಾಕಿಸ್ತಾನದ ನೆಟ್ ರನ್ ರೇಟ್ ಇನ್ನೂ ಉತ್ತಮವಾಗುತ್ತದೆ, ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ತಂಡಗಳು ಗುಂಪು-2 ರಿಂದ ಸೆಮಿಫೈನಲ್ ತಲುಪುತ್ತವೆ.

ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ
ಹಾಲಿ ನೆಟ್ ರನ್ ರೇಟ್ ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವನ್ನಾಗಿ ಮಾಡಿದೆ. ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಟೀಂ ಇಂಡಿಯಾ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಉಳಿಯಬಹುದು, ಇಲ್ಲದಿದ್ದರೆ ಅವರು ಸೆಮಿಫೈನಲ್‌ಗೆ ಮುನ್ನಡೆಯಲು ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾವನ್ನು ಅವಲಂಬಿಸಬೇಕಾಗಬಹುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com