ಟಿ20 ವಿಶ್ವಕಪ್: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು, ಸೆಮಿಫೈನಲ್‌ ಪ್ರವೇಶ

ಟೀಂ ಇಂಡಿಯಾ, ಜಿಂಬಾಬ್ವೆ ವಿರುದ್ಧ 71 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾನುವಾರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ ಪ್ರವೇಶಿಸಿದೆ. ಈ ಮೂಲಕ 'ಎ' ಗುಂಪಿನಲ್ಲಿ ಎರಡನೇ ಸ್ಥಾನ ಪಡೆದ ಇಂಗ್ಲೆಂಡ್‌...
ಭಾರತ ತಂಡ
ಭಾರತ ತಂಡ

ಮೆಲ್ಬರ್ನ್: ಟೀಂ ಇಂಡಿಯಾ, ಜಿಂಬಾಬ್ವೆ ವಿರುದ್ಧ 71 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾನುವಾರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ ಪ್ರವೇಶಿಸಿದೆ. ಈ ಮೂಲಕ 'ಎ' ಗುಂಪಿನಲ್ಲಿ ಎರಡನೇ ಸ್ಥಾನ ಪಡೆದ ಇಂಗ್ಲೆಂಡ್‌ ಎದುರು ಸೆಮಿಫೈನಲ್‌ ಪಂದ್ಯವನ್ನು ಆಡಲಿದೆ. 

ಇಂದು ಆಸ್ಟ್ರೇಲಿಯಾದ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದೆ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಮಾಡಿದ ಭಾರತ, ಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕ(61)ದ ನೆರವಿನೊಂದಿಗೆ  ನಿಗದಿತ 20 ಓವರ್​ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 186 ರನ್ ಕಲೆ ಹಾಕಿತು.

ಗೆಲುವಿಗೆ 187 ರನ್ ಗಳ ಗುರಿ ಬೆನ್ನತ್ತಿದ ಜಿಂಬಾಬ್ವೆ ಸತತ ವಿಕೆಟ್ ಗಳನ್ನು ಕಳೆದುಕೊಳ್ಳುವ ಮೂಲಕ 17.2 ಓವರ್‌ಗಳಲ್ಲಿ 115 ರನ್‌ಗಳಿಗೆ ಆಲ್‌ಔಟ್‌ ಆಗುವ ಮೂಲಕ ಹೀನಾಯ ಸೋಲು ಅನುಭವಿಸಿತು.

ಭಾರತದ ಪರ ಅಶ್ವಿನ್​ 3 ವಿಕೆಟ ಪಡೆದರೆ, ಮೊಹಮ್ಮದ್ ಶಮಿ ಮತ್ತು ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್ ಹಾಗೂ ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ ಮತ್ತು ಅರ್ಷದೀಪ್ ಸಿಂಗ್ ತಲಾ 1 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಇನ್ನು ಕೆಎಲ್ ರಾಹುಲ್ 51 ರನ ಗಳಿಸಿದರೆ, ಸೂರ್ಯಕುಮಾರ್ ಯಾದವ್ 25 ಎಸೆತದಲ್ಲಿ 4 ಸಿಕ್ಸ್ 6 ಬೌಂಡರಿಗಳ ನೆರವಿನಿಂದ ಅಜೇಯರಾಗಿ 61 ರನ್ ಗಳಿಸಿದರು. ಉಳಿದಂತೆ ನಾಯಕ ರೋಹಿತ್ ಶರ್ಮಾ 15 ರನ್, ವಿರಾಟ್ ಕೊಹ್ಲಿ 26 ರನ್, ರಿಷಭ್ ಪಂತ್ 3 ರನ್ ಮತ್ತು ಹಾರ್ದಿಕ್ ಪಾಂಡ್ಯ 18 ರನ್ ಗಳಿಸಿ ಮಿಂಚಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com