ಅತ್ಯಾಚಾರ ಆರೋಪ: ಶ್ರೀಲಂಕಾ ಕ್ರಿಕೆಟ್ ತಂಡದಿಂದ ಧನುಷ್ಕಾ ಗುಣತಿಲಕ ಅಮಾನತು

ಅತ್ಯಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಶ್ರೀಲಂಕಾ ಬ್ಯಾಟರ್ ಧನುಷ್ಕ ಗುಣತಿಲಕ ಅವರನ್ನು ತಂಡದಿಂದ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಧನುಷ್ಕಾ ಗುಣತಿಲಕ
ಧನುಷ್ಕಾ ಗುಣತಿಲಕ
Updated on

ಸಿಡ್ನಿ: ಅತ್ಯಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಶ್ರೀಲಂಕಾ ಬ್ಯಾಟರ್ ಧನುಷ್ಕ ಗುಣತಿಲಕ ಅವರನ್ನು ತಂಡದಿಂದ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಆಸ್ಟ್ರೇಲಿಯಾ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದ್ದು, ಪೊಲೀಸರು ಧನುಷ್ಕಾ ಗುಣತಿಲಕ ಅವರನ್ನು ಬಂಧನಕ್ಕೊಳಪಡಿಸಿದ್ದಾರೆ. ಹೀಗಾಗಿ ಶ್ರೀಲಂಕಾ ಕ್ರಿಕೆಟ್‌ನ ಕಾರ್ಯನಿರ್ವಾಹಕ ಸಮಿತಿಯು ದನುಷ್ಕಾ ಗುಣತಿಲಕ ಅವರನ್ನು ತಕ್ಷಣವೇ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಅಮಾನತುಗೊಳಿಸಲು ನಿರ್ಧರಿಸಿದೆ. ಅವರನ್ನು ಯಾವುದೇ ಆಯ್ಕೆಗಳಿಗೆ ಪರಿಗಣಿಸುವುದಿಲ್ಲ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ಮಾಹಿತಿ ನೀಡಿದೆ.

ಆರೋಪ ಸಂಬಂಧದ ತನಿಖೆಯನ್ನು ತ್ವರಿತಗೊಳಿಸಲು ಅಗತ್ಯ ಕ್ರಮಗಳ ಕೈಗೊಳ್ಳಲಾಗುತ್ತಿದ್ದು, ಆಸ್ಟ್ರೇಲಿಯಾ ನ್ಯಾಯಾಲಯದಲ್ಲಿ ಪ್ರಕರಣ ಮುಕ್ತಾಯಗೊಂಡ ಬಳಿಕ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕಂಡುಬಂದಿದ್ದೇ ಆದರೆ, ಆಟಗಾರನಿಗೆ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದೆ.

31 ವರ್ಷದ ಗುಣತಿಲಕ ಆನ್'ಲೈನ್ ಡೇಟಿಂಗ್ ಆ್ಯಪ್ ಮೂಲಕ ಮಹಿಳೆಯೊಬ್ಬರ ಸಂಪರ್ಕ ಮಾಡಿದ್ದು, ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪ ಕೇಳಿ ಬಂದಿದೆ.

ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾಗಿ 29 ವರ್ಷದ ಮಹಿಳೆ ನೀಡಿದ ದೂರು ಹಿನ್ನೆಲೆಯಲ್ಲಿ ಗುಣತಿಲಕ ಅವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಆಸ್ಟ್ರೇಲಿಯಾ ಪೊಲೀಸರು ತಿಳಿಸಿದ್ದರು.

2015ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್'ಗೆ ಪಾದಾರ್ಪಣೆ ಮಾಡಿದ್ದ ಗುಣತಿಲಕ ಟಿ20 ವಿಶ್ವಕಪ್ ಆಡಲು ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಗುಣತಿಲಕ ಅವರನ್ನು ಆಸ್ಟ್ರೇಲಿಯಾ ಪೊಲೀಸರು ಬಂಧನಕ್ಕೊಳಪಡಿಸಿರುವ ಹಿನ್ನೆಲೆಯಲ್ಲಿ ಗುಣತಿಲಕ ಅವರನ್ನು ಬಿಟ್ಟು ಉಳಿದ ಆಟಗಾರರು ತವರಿಗೆ ಮರಳಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com