ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲ್ಯಾಂಡ್ ತಂಡವನ್ನು 152 ರನ್ ಗಳಿಗೆ ಕಟ್ಟಿಹಾಕಿದ ಪಾಕಿಸ್ತಾನ

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ನ್ಯೂಜಿಲ್ಯಾಂಡ್ ತಂಡ 152 ರನ್ ಪೇರಿಸಿದೆ.
ಪಾಕಿಸ್ತಾನ ತಂಡ
ಪಾಕಿಸ್ತಾನ ತಂಡ

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ನ್ಯೂಜಿಲ್ಯಾಂಡ್ ತಂಡ 152 ರನ್ ಪೇರಿಸಿದೆ. 

ಸಿಡ್ನಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲ್ಯಾಂಡ್ ತಂಡವನ್ನು ಸಾಧಾರಣ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಪಾಕಿಸ್ತಾನ ಯಶಸ್ವಿಯಾಗಿದೆ. ನಿಗದಿತ ಓವರ್ ನಲ್ಲಿ ನ್ಯೂಜಿಲ್ಯಾಂಡ್ 4 ವಿಕೆಟ್ ನಷ್ಟಕ್ಕೆ 152 ರನ್ ಪೇರಿಸಿದ್ದು ಪಾಕ್ ಗೆ ಗೆಲ್ಲಲು 153 ರನ್ ಗಳ ಗುರಿ ನೀಡಿದೆ. 

ನ್ಯೂಜಿಲ್ಯಾಂಡ್ ಪರ ಫಿನ್ ಅಲೆನ್ 4, ಡೆವೊನ್ ಕಾನ್ವೇ 21, ಕೇನ್ ವಿಲಿಯಮ್ಸನ್  46, ಗ್ಲೆನ್ ಫಿಲಿಪ್ಸ್ 6 ಡೇರಿಲ್ ಮಿಚೆಲ್ ಅಜೇಯ 53 ಜೇಮ್ಸ್ ನೀಶಮ್ ಅಜೇಯ 16 ರನ್ ಪೇರಿಸಿದ್ದಾರೆ.

ಪಾಕ್ ಪರ ಬೌಲಿಂಗ್ ನಲ್ಲಿ ಶಾಹೀನ್ ಶಾ ಆಫ್ರಿದಿ 2 ಮತ್ತು ಮೊಹಮ್ಮದ್ ನವಾಜ್ 1 ವಿಕೆಟ್ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com