T20 World Cup: ಆಂಗ್ಲರನ್ನು ಅವರ ತವರಲ್ಲೇ ಸೋಲಿಸಿದ್ದೇವೆ, ಗೆಲ್ಲುವ ವಿಶ್ವಾಸವಿದೆ; ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

ನಾಳೆ (ನ. 10) ಅಡಿಲೇಡ್ ಓವಲ್‌ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ,  ಆಂಗ್ಲರನ್ನು ಅವರ ತವರು ನೆಲದಲ್ಲಿಯೇ ಸೋಲಿಸಿದ್ದೇವೆ. ಹೀಗಾಗಿ ನಾಳಿನ ಪಂದ್ಯವನ್ನು ನಾವೇ ಗೆಲ್ಲುತ್ತೇವೆ ಎಂದಿದ್ದಾರೆ.
ರೋಹಿತ್ ಶರ್ಮಾ
ರೋಹಿತ್ ಶರ್ಮಾ
Updated on

ಅಡಿಲೇಡ್: ನಾಳೆ (ನ. 10) ಅಡಿಲೇಡ್ ಓವಲ್‌ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ,  ಆಂಗ್ಲರನ್ನು ಅವರ ತವರು ನೆಲದಲ್ಲಿಯೇ ಸೋಲಿಸಿದ್ದೇವೆ. ಹೀಗಾಗಿ ನಾಳಿನ ಪಂದ್ಯವನ್ನು ನಾವೇ ಗೆಲ್ಲುತ್ತೇವೆ ಎಂದು ಬುಧವಾರ ಅಡಿಲೇಡ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

'ನಮಗೆ ಟಿ 20 ಕ್ರಿಕೆಟ್‌ ಪಂದ್ಯಗಳ ಸ್ವರೂಪ ಚೆನ್ನಾಗಿ ತಿಳಿದಿದೆ.  ಆದರೆ, ಅವರ ತವರಿನಲ್ಲಿ ಇಂಗ್ಲೆಂಡ್ ಅನ್ನು ಸೋಲಿಸುವುದು ಕೂಡ ಸವಾಲಾಗಿತ್ತು ಮತ್ತು ನಾವು ಅದನ್ನು ಜಯಿಸಿದ್ದೇವೆ. ಅದುವೇ ನಮಗೆ ಆತ್ಮವಿಶ್ವಾಸವನ್ನು ನೀಡಿದೆ' ಎಂದು ಹೇಳಿದರು.

ಬಲಿಷ್ಠ ಇಂಗ್ಲೆಂಡ್‌ ತಂಡವನ್ನು ನಾವು ಈ ಹಿಂದೆ ಅವರ ತವರು ನೆಲದಲ್ಲೇ ಮಣಿಸಿದ್ದೇವೆ. ಹಾಗೆಂದು ನಾವು ಮೈಮರೆತು ಆಟವಾಡಲ್ಲ. ಸೆಮಿಫೈನಲ್‌ ಅತ್ಯಂತ ಮಹತ್ವದ್ದಾಗಿದ್ದು, ನಾವು ನಮ್ಮ ಸಂಪೂರ್ಣ ಸಾಮರ್ಥ್ಯದೊಂದಿಗೆ ಕಣಕ್ಕಿಳಿಯಲಿದ್ದೇವೆ. ಈ ಸೆಮಿಫೈನಲ್ ಘರ್ಷಣೆಯು ತಮ್ಮ ಸಾಮರ್ಥ್ಯವನ್ನು ತೋರಿಸಲು ಸಿಕ್ಕಿರುವ ಒಂದು ಅವಕಾಶವಾಗಿದೆ' ಎಂದು ರೋಹಿತ್ ಶರ್ಮಾ ಹೇಳಿದರು.

'ನಾವು ಇಲ್ಲಿಗೆ ಯಾಕೆ ಬಂದಿದ್ದೇವೆಯೋ ಅದನ್ನು ಮಾಡಲು ಇದು ನಮಗೆ ಸಿಕ್ಕಿರುವ ಉತ್ತಮ ಅವಕಾಶವಾಗಿದೆ. ಈ ಪಂದ್ಯಾವಳಿಯಲ್ಲಿ ಈವರೆಗೂ ಉತ್ತಮವಾಗಿ ಆಡಿದ್ದೇವೆ ಮತ್ತು ಸೆಮಿಫೈನಲ್ ಪಂದ್ಯದಲ್ಲೂ ನಾವು ಉತ್ತಮವಾಗಿಯೇ ಆಡಬೇಕು. ಇದು ಬ್ಯಾಟ್ ಮತ್ತು ಬಾಲ್ ನಡುವಿನ ಸ್ಪರ್ಧೆಯಾಗಿದೆ. ನಾವು ನಮ್ಮ ಗುರಿಯನ್ನು ತಲುಪಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ' ಎಂದು ತಿಳಿಸಿದರು.

ನಾಕೌಟ್ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಮಹತ್ವವನ್ನು ಒತ್ತಿ ಹೇಳಿದ ಅವರು, 'ಆಟಗಾರರು ಹೆಮ್ಮೆಯಿಂದ ಆಡಬೇಕು ಮತ್ತು ನಾಕೌಟ್ ಆಟಗಳು ಮುಖ್ಯ. ನಾಕೌಟ್ ಆಟದಲ್ಲಿ ಉತ್ತಮ ಪ್ರದರ್ಶನ ನೀಡುವುದು ಅತ್ಯಗತ್ಯ. ಆದರೆ, ಒಂದು ನಿರ್ದಿಷ್ಟ ಆಟದಲ್ಲಿ ಅದು ನಿಮ್ಮ ಸಾಮರ್ಥ್ಯವನ್ನು ಸಾಭೀತುಪಡಿಸುವುದಿಲ್ಲ. ಇದನ್ನು ಅರಿತುಕೊಳ್ಳುವುದು ಬಹಳ ಮುಖ್ಯ. ಆಟಗಾರರಾಗಿ ನಮ್ಮ ಬಗ್ಗೆ ಹೆಮ್ಮೆ ಪಡುವುದು ಮತ್ತು ನಾವು ಎಲ್ಲಿಂದ ಬಂದಿದ್ದೇವೆ ಎಂಬುದು ಮುಖ್ಯ. ಉತ್ತಮ ಫಲಿತಾಂಶ ಪಡೆಯಲು ನಾಳೆ ನಾವು ಚೆನ್ನಾಗಿ ಆಡಬೇಕು. ನಾಕೌಟ್ ಆಟಗಳಲ್ಲಿ ನೀವು ಉತ್ತಮ ಪ್ರದರ್ಶನ ನೀಡಿದರೆ, ಅದು ನಿಮಗೆ ಆತ್ಮವಿಶ್ವಾಸವನ್ನು ನೀಡುತ್ತದೆ' ಎಂದು ಆರಂಭಿಕ ಬ್ಯಾಟ್ಸ್‌ಮನ್ ಹೇಳಿದರು.

ಈ ವರ್ಷದ ಆರಂಭದಲ್ಲಿ ಜುಲೈ ತಿಂಗಳಿನಲ್ಲಿ ಇಂಗ್ಲೆಂಡ್ ಪ್ರವಾಸದಲ್ಲಿ ಭಾರತವು ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 2-1 ರಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತ್ತು. ಸೂರ್ಯಕುಮಾರ್ ಯಾದವ್ ಅವರು 200 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್‌ನೊಂದಿಗೆ ಮೂರು ಇನ್ನಿಂಗ್ಸ್‌ಗಳಲ್ಲಿ 171 ರನ್ ಗಳಿಸಿದ್ದರು.

ಈ ಬಾರಿ ವಿಶ್ವಕಪ್ ಗೆದ್ದೇ ಗೆಲ್ಲುತ್ತೇವೆ ಎಂದು ಛಲ ತೊಟ್ಟಿರುವ ಭಾರತ ತಂಡ, ಸೂಪರ್ 12ರಲ್ಲಿ 5 ಪಂದ್ಯಗಳಿಂದ 8 ಅಂಕಗಳೊಂದಿಗೆ ಗ್ರೂಪ್ 2ರಲ್ಲಿ ಅಗ್ರಸ್ಥಾನದೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ. ನಾಳೆ (ನ. 10) ಅಡಿಲೇಡ್ ಓವಲ್‌ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಸೆಣಸಲಿದ್ದು, ಇಲ್ಲಿ ಗೆದ್ದ ತಂಡ ಪ್ರಶಸ್ತಿ ಹಣಾಹಣಿಗೆ ಮುನ್ನಡೆಯಲಿದೆ.

ನವೆಂಬರ್ 13 ರಂದು ಐಕಾನಿಕ್ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಫೈನಲ್‌ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com