ಭಾರತದ ಮುಂದಿನ T20I ನಾಯಕ ಹಾರ್ದಿಕ್ ಪಾಂಡ್ಯ: ಸುನಿಲ್ ಗವಾಸ್ಕರ್

ಭಾರತ ಟಿ20ಐ ಕ್ರಿಕೆಟ್ ತಂಡದ ಮುಂದಿನ ನಾಯಕರಾಗಿ ಹಾರ್ದಿಕ್ ಪಾಂಡ್ಯಾರನ್ನು ಆಯ್ಕೆ ಮಾಡಬೇಕು ಎಂದು ಭಾರತದ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಹೇಳಿದ್ದಾರೆ.
ಸುನಿಲ್ ಗವಾಸ್ಕರ್ ಮತ್ತು ಹಾರ್ದಿಕ್ ಪಾಂಡ್ಯ
ಸುನಿಲ್ ಗವಾಸ್ಕರ್ ಮತ್ತು ಹಾರ್ದಿಕ್ ಪಾಂಡ್ಯ

ಅಡಿಲೇಡ್: ಭಾರತ ಟಿ20ಐ ಕ್ರಿಕೆಟ್ ತಂಡದ ಮುಂದಿನ ನಾಯಕರಾಗಿ ಹಾರ್ದಿಕ್ ಪಾಂಡ್ಯಾರನ್ನು ಆಯ್ಕೆ ಮಾಡಬೇಕು ಎಂದು ಭಾರತದ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಹೇಳಿದ್ದಾರೆ.

ಗುರುವಾರ ಅಡಿಲೇಡ್‌ನಲ್ಲಿ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 10 ವಿಕೆಟ್‌ಗಳ ಅವಮಾನಕರ ಸೋಲಿನ ನಂತರ ತಂಡದ ಹಲವು ಹಿರಿಯ ಆಟಗಾರರು ನಿವೃತ್ತಿ ಘೋಷಿಸುತ್ತಾರೆ ಎಂದು ದಂತಕಥೆ ಸುನಿಲ್ ಗವಾಸ್ಕರ್ ಭವಿಷ್ಯ ನುಡಿದಿದ್ದು, ನಾಯಕತ್ವ ಸ್ಥಾನದಿಂದ ರೋಹಿತ್ ಶರ್ಮಾ ಕೆಳಗಿಳಿದ ನಂತರ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕತ್ವವನ್ನು ವಹಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

"ನಾಯಕನಾಗಿ ಅವರ ಮೊದಲ ನಿಯೋಜನೆಯಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿ ಅನ್ನು ಗೆದ್ದ ನಂತರ, ಹಾರ್ದಿಕ್ ಪಾಂಡ್ಯ ಅವರನ್ನು ಭಾರತ ಟಿ20 ತಂಡದ ಮುಂದಿನ ನಾಯಕನನ್ನಾಗಿ ಗುರುತಿಸಲಾಗುತ್ತಿದೆ. ಭವಿಷ್ಯದಲ್ಲಿ ಹಾರ್ದಿಕ್ ಪಾಂಡ್ಯ ಖಂಡಿತವಾಗಿಯೂ ತಂಡವನ್ನು ವಹಿಸಿಕೊಳ್ಳುತ್ತಾರೆ ಮತ್ತು ಕೆಲವು ಹಿರಿಯ ಆಟಗಾರರ ನಿವೃತ್ತಿ ಸರಣಿ ಇರಲಿದೆ. ಆಟಗಾರರು ಅದರ ಬಗ್ಗೆ ಸಾಕಷ್ಟು ಯೋಚಿಸುತ್ತಾರೆ ಎಂದು ಭಾರತದ ಮಾಜಿ ನಾಯಕ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡುವಾಗ ಹೇಳಿದ್ದಾರೆ.

30ರ ಮಧ್ಯದಲ್ಲಿ ಹಲವಾರು ಆಟಗಾರರು ಭಾರತೀಯ T20I ತಂಡದಲ್ಲಿ ತಮ್ಮ ಸ್ಥಾನವನ್ನು ಮರುಪರಿಶೀಲಿಸುತ್ತಿದ್ದಾರೆ. ಈ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಅತ್ಯಧಿಕ ಸ್ಕೋರರ್ ಆಗಿದ್ದರೆ, 30 ರ ದಶಕದ ಮಧ್ಯದಲ್ಲಿರುವ ನಾಯಕ ರೋಹಿತ್ ಶರ್ಮಾ, ರವಿಚಂದ್ರನ್ ಅಶ್ವಿನ್ ಮತ್ತು ದಿನೇಶ್ ಕಾರ್ತಿಕ್ ಅವರಂತಹ ಇತರ ಹಿರಿಯ ಆಟಗಾರರಿಗೆ ಇದು ನಿರಾಶಾದಾಯಕ ಸರಣಿಯಾಗಿತ್ತು. ಹೀಗಾಗಿ ಅವರು ತಮ್ಮ ಟಿ20 ಭವಿಷ್ಯದ ಕುರಿತು ಮರು ಪರಿಶೀಲನೆ ನಡೆಸುವ ಸಾಧ್ಯತೆ ಇದೆ ಎಂದು ಗವಾಸ್ಕರ್  ಹೇಳಿದ್ದಾರೆ.

ಇನ್ನು ಇಂದು ನಡೆದ ಟಿ20 ವಿಶ್ವಕಪ್ ಟೂರ್ನಿಯ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಅಲೆಕ್ಸ್ ಹೇಲ್ಸ್ ಮತ್ತು ಜೋಸ್ ಬಟ್ಲರ್ ಅರ್ಧಶತಕಗಳ ನೆರವಿನಿಂದ ಇಂಗ್ಲೆಂಡ್ ತಂಡ ಭಾರತವನ್ನು 10 ವಿಕೆಟ್‌ಗಳಿಂದ ಸೋಲಿಸಿತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com