ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ಟಿ-20 ಕ್ರಿಕೆಟ್ ನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ವಿರಾಟ್ ಕೊಹ್ಲಿ!

ಟೀಂ ಇಂಡಿಯಾ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು ಸಾಧಿಸಿದ್ದಾರೆ.  ಟಿ-20 ಕ್ರಿಕೆಟ್ ನಲ್ಲಿ 4,000 ರನ್ ಪೂರೈಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಆಡಿಲೇಡ್: ಟೀಂ ಇಂಡಿಯಾ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು ಸಾಧಿಸಿದ್ದಾರೆ.  ಟಿ-20 ಕ್ರಿಕೆಟ್ ನಲ್ಲಿ 4,000 ರನ್ ಪೂರೈಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಇಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಸೆಮಿ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದರು.

ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸುವವರಲ್ಲಿ 34 ವರ್ಷದ ವಿರಾಟ್ ಕೊಹ್ಲಿ ಈಗಾಗಲೇ ಅಗ್ರಸ್ಥಾನದಲ್ಲಿದ್ದಾರೆ. ಟಿ-20 ವಿಶ್ವಕಪ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಬ್ಯಾಟ್ಸ್ ಮನ್ ಗಳಲ್ಲಿಯೂ ಕೊಹ್ಲಿ ಮುಂಚೂಣಿಯಲ್ಲಿದ್ದಾರೆ. 115ನೇ ಗೇಮ್ ನಲ್ಲಿ ಕೊಹ್ಲಿ ಈ ಮೈಲುಗಲ್ಲು ಸಾಧಿಸಿದರು.

ಟಿ-20 ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಉತ್ತಮ ಫಾರ್ಮ್ ನಲ್ಲಿದ್ದಾರೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಇವರ ನೆರವಿನಿಂದಲೇ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು.

Related Stories

No stories found.

Advertisement

X
Kannada Prabha
www.kannadaprabha.com