ಐಸಿಸಿ ಟಿ20 ವಿಶ್ವಕಪ್ ಫೈನಲ್: ಇಂಗ್ಲೆಂಡ್ ಆಟಗಾರರ ಹುರಿದುಂಬಿಸಿದ ಬ್ರಿಟನ್ ಪ್ರಧಾನಿ ಸುನಕ್!

ಐಸಿಸಿ ಟಿ20 ವಿಶ್ವಕಪ್ ಫೈನಲ್ ನಲ್ಲಿ ಪಾಕಿಸ್ತಾನದೊಂದಿಗೆ ಇಂದು ಸೆಣಸಲಿರುವ ಇಂಗ್ಲೆಂಡ್ ತಂಡಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಶುಭ ಕೋರಿದ್ದು, ಟ್ವೀಟ್ ಮೂಲಕ ಇಂಗ್ಲೆಂಡ್ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ.
ರಿಷಿ ಸುನಕ್
ರಿಷಿ ಸುನಕ್

ಲಂಡನ್: ಐಸಿಸಿ ಟಿ20 ವಿಶ್ವಕಪ್ ಫೈನಲ್ ನಲ್ಲಿ ಪಾಕಿಸ್ತಾನದೊಂದಿಗೆ ಇಂದು ಸೆಣಸಲಿರುವ ಇಂಗ್ಲೆಂಡ್ ತಂಡಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಶುಭ ಕೋರಿದ್ದು, ಟ್ವೀಟ್ ಮೂಲಕ ಇಂಗ್ಲೆಂಡ್ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ.

"ಪಾಕಿಸ್ತಾನದ ವಿರುದ್ಧ T20 ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ಗೆ ಶುಭವಾಗಲಿ. ಬ್ರಿಟನ್ ನಾದ್ಯಂತ ಇರುವ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗಳೊಂದಿಗೆ ನಾನು ನಿಮ್ಮನ್ನು ಹುರಿದುಂಬಿಸುತ್ತೇನೆ. ನಾವು ಎಲ್ಲಾ ರೀತಿಯಲ್ಲಿ ನಿಮ್ಮ ಹಿಂದೆ ಇದ್ದೇವೆ ರಿಷಿ ಸುನಕ್ ಟ್ವಿಟ್ ಮಾಡಿದ್ದಾರೆ.

ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವಿನ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯವು ಇಂದು ಮಧ್ಯಾಹ್ನ 1:30 ಕ್ಕೆ (IST) ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಪ್ರಾರಂಭವಾಗಲಿದೆ. ಪಂದ್ಯ ಆರಂಭವಾಗುವ ಅರ್ಧ ಗಂಟೆ ಮೊದಲು ಟಾಸ್ ನಿಗದಿಯಾಗಿದೆ.

ಈ ಹಿಂದೆ 2ನೇ ಸೆಮಿಫೈನಲ್ ನಲ್ಲಿ ಭಾರತವನ್ನು ಇಂಗ್ಲೆಂಡ್ 10 ವಿಕೆಟ್‌ಗಳಿಂದ ಸೋಲಿಸಿ ಫೈನಲ್‌ಗೆ ಅರ್ಹತೆ ಪಡೆದರೆ, ಪಾಕಿಸ್ತಾನವು ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ಅನ್ನು ಸೋಲಿಸಿ ಫೈನಲ್ ಗೇರಿತ್ತು. ಪಾಕಿಸ್ತಾನ (2009) ಮತ್ತು ಇಂಗ್ಲೆಂಡ್ (2010) 2007 ರಲ್ಲಿ ಪ್ರಾರಂಭವಾದಾಗಿನಿಂದ ತಲಾ ಒಂದು ಬಾರಿ T20 ವಿಶ್ವಕಪ್ ಗೆದ್ದಿವೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com