3ನೇ ಟಿ20: ಮತ್ತೆ ರಬಾಡಾಗೆ ರೋಹಿತ್ ಶರ್ಮಾ ವಿಕೆಟ್, ಜಂಟಿ ದಾಖಲೆ

ಭಾರತದ ವಿರುದ್ಧದ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ರಬಾಡಾಗೆ ವಿಕೆಟ್ ಒಪ್ಪಿಸುವ ಮೂಲಕ ಹೀನಾಯ ದಾಖಲೆಗೆ ಕಾರಣರಾಗಿದ್ದಾರೆ.
ರೋಹಿತ್ ಶರ್ಮಾ-ರಬಾಡಾ
ರೋಹಿತ್ ಶರ್ಮಾ-ರಬಾಡಾ
Updated on

ಇಂದೋರ್: ಭಾರತದ ವಿರುದ್ಧದ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ರಬಾಡಾಗೆ ವಿಕೆಟ್ ಒಪ್ಪಿಸುವ ಮೂಲಕ ಹೀನಾಯ ದಾಖಲೆಗೆ ಕಾರಣರಾಗಿದ್ದಾರೆ.

ಹೌದು.. ಇಂದು ಇಂದೋರ್ ನ ಹೋಳ್ಕರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೀಡಿದ 228 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡಕ್ಕೆ ನಾಯಕ ರೋಹಿತ್ ಶರ್ಮಾ ಆರಂಭದಲ್ಲೇ ನಿರಾಸೆ ಮೂಡಿಸಿದರೆ. ಇನ್ನಿಂಗ್ಸ್ ನ 2ನೇ ಎಸೆತದಲ್ಲೇ ರೋಹಿತ್ ಶರ್ಮಾ ರಬಾಡಾ ಬೌಲಿಂಗ್ ನಲ್ಲಿ ಕ್ಲೀನ್ ಬೋಲ್ಡ್ ಆಗಿ ಔಟಾದರು. ಈ ಮೂಲಕ ಕ್ರಿಕೆಟ್ ನಲ್ಲಿ ರೋಹಿತ್ ಶರ್ಮಾ ರಬಾಡಾಗೆ 11ಬಾರಿ ವಿಕೆಟ್ ಒಪ್ಪಿಸಿದರು.

ಆ ಮೂಲಕ ರಬಾಡಾ ಕ್ರಿಕೆಟ್ ನಲ್ಲಿ ರೋಹಿತ್ ಶರ್ಮಾರನ್ನು ಅತೀಹೆಚ್ಚು ಬಾರಿ ಔಟ್ ಮಾಡಿದ ಜಂಟಿ ಬೌಲರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ಹಿಂದೆ ನ್ಯೂಜಿಲೆಂಡ್ ಬೌಲರ್ ಟಿಮ್ ಸೌಥಿ ಕೂಡ ರೋಹಿತ್ ಶರ್ಮಾರನ್ನು 11 ಬಾರಿ ಔಟ್ ಮಾಡಿದ ಸಾಧನೆ ಮಾಡಿದ್ದಾರೆ. ಉಳಿದಂತೆ ರೋಹಿತ್ ಶರ್ಮಾ ಶ್ರೀಲಂಕಾದ ಎಂಜೆಲೋ ಮ್ಯಾಥ್ಯೂಸ್ ಗೆ 10 ಬಾರಿ, ನ್ಯೂಜಿಲೆಂಡ್ ನ ಟ್ರೆಂಟ್ ಬೌಲ್ಟ್ ಗೆ 8 ಬಾರಿ, ದಕ್ಷಿಣ ಆಫ್ರಿಕಾದ ಮಾರ್ನೆ ಮಾರ್ಕೆಲ್ ಬೌಲಿಂಗ್ ನಲ್ಲಿ 7 ಬಾರಿ ಔಟಾಗಿದ್ದಾರೆ.

Dismissing Rohit Sharma most times in all Internationals
11 T Southee/ K Rabada
10 A Mathews
8 T Boult
7 M Morkel

 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com