ಟಿ20 ವಿಶ್ವಕಪ್ 2022: ನೆದರ್ಲ್ಯಾಂಡ್ ವಿರುದ್ಧ ಭಾರತಕ್ಕೆ 56 ರನ್ ಗಳ ಭರ್ಜರಿ ಜಯ!

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ನೆದರ್ಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು ಮೂಲಕ ಟೂರ್ನಿಯಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದಿದೆ.
ಟೀಂ ಇಂಡಿಯಾ ತಂಡ
ಟೀಂ ಇಂಡಿಯಾ ತಂಡ

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ನೆದರ್ಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು ಮೂಲಕ ಟೂರ್ನಿಯಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದಿದೆ. 

ಸಿಡ್ನಿಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಪೇರಿಸಿತ್ತು. ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ 53, ವಿರಾಟ್ ಕೊಹ್ಲಿ ಅಜೇಯ 62 ಹಾಗೂ ಸೂರ್ಯಕುಮಾರ್ ಯಾದವ್ ಅಜೇಯ 51 ರನ್ ಪೇರಿಸಿದ್ದರು. 

ಭಾರತ ನೀಡಿದ 180 ರನ್ ಗಳ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 123 ರನ್ ಬಾರಿಸಲಷ್ಟೇ ಸಾಧ್ಯವಾಗಿದ್ದು ಈ ಮೂಲಕ 56 ರನ್ ಗಳಿಂದ ಸೋಲಿಗೆ ಶರಣಾಗಿದೆ.

ನೆದರ್ಲ್ಯಾಂಡ್ ಪರ ವಿಕ್ರಮ್ಜಿತ್ ಸಿಂಗ್ 1, ಮ್ಯಾಕ್ಸ್ ಒ'ಡೌಡ್ 16, ಬಾಸ್ ಡಿ ಲೀಡೆ 16, ಕಾಲಿನ್ ಅಕರ್ಮನ್ 17, ಟಿಮ್ ಪ್ರಿಂಗಲ್ 20, ಶರೀಜ್ ಅಹ್ಮದ್ ಅಜೇಯ 16 ರನ್ ಬಾರಿಸಿದ್ದಾರೆ. 

ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಭುವನೇಶ್ವರ್ ಕುಮಾರ್, ಅರ್ಷ್ ದೀಪ್ ಸಿಂಗ್, ಅಕ್ಸರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್ ತಲಾ 2 ವಿಕೆಟ್ ಹಾಗೂ ಮೊಹಮ್ಮದ್ ಶಮಿ 1 ವಿಕೆಟ್ ಪಡೆದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com