ಟಿ20 ವಿಶ್ವಕಪ್: ಪಾಕಿಸ್ತಾನದ ಮಹಮದ್ ರಿಜ್ವಾನ್ ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ ಭಾರತದ ಸೂರ್ಯ ಕುಮಾರ್ ಯಾದವ್!

ಟಿ20 ವಿಶ್ವಕಪ್ ನಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ ಭಾರತ ತಂಡದ ಸ್ಫೋಟಕ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಮತ್ತೊಂದು ದಾಖಲೆ ಬರೆದಿದ್ದು, ಪಾಕಿಸ್ತಾನದ ಮಹಮದ್ ರಿಜ್ವಾನ್ ಅವರನ್ನು ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ್ದಾರೆ.
ಸೂರ್ಯ ಕುಮಾರ್ ಯಾದವ್
ಸೂರ್ಯ ಕುಮಾರ್ ಯಾದವ್
Updated on

ಸಿಡ್ನಿ: ಟಿ20 ವಿಶ್ವಕಪ್ ನಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ ಭಾರತ ತಂಡದ ಸ್ಫೋಟಕ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಮತ್ತೊಂದು ದಾಖಲೆ ಬರೆದಿದ್ದು, ಪಾಕಿಸ್ತಾನದ ಮಹಮದ್ ರಿಜ್ವಾನ್ ಅವರನ್ನು ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ್ದಾರೆ.

ನೆದರ್‌ಲ್ಯಾಂಡ್ ವಿರುದ್ಧ ಸ್ಫೋಟಕ ಅರ್ಧಶತಕ ಗಳಿಸಿದ ಟೀಂ ಇಂಡಿಯಾ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಪಾಕಿಸ್ತಾನದ ಓಪನರ್ ಮೊಹಮ್ಮದ್ ರಿಜ್ವಾನ್ ದಾಖಲೆಯನ್ನು ಸರಿಗಟ್ಟಿದ್ದು, ಈ ವರ್ಷದಲ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿಹೆಚ್ಚು ರನ್‌ಗಳಿದ ಮೊದಲ ಆಟಗಾರ ಎನ್ನಿಸಿಕೊಂಡಿದ್ದಾರೆ. 

ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ T20 ಸರಣಿಯಲ್ಲೂ ಅಬ್ಬರಿಸಿದ ಸೂರ್ಯಕುಮಾರ್ ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ 780 ರೇಟಿಂಗ್ಸ್ ಗಳಿಸುವ ಮೂಲಕ 3ನೇ ಸ್ಥಾನಕ್ಕೇರಿದ್ದರು. ಅಲ್ಲದೇ 573 ಎಸೆತಗಳಲ್ಲಿ ವೇಗದ 1 ಸಾವಿರ ರನ್ ಪೂರೈಸಿದ ಖ್ಯಾತಿಗೆ ಪಾತ್ರರಾಗಿದ್ದರು. ಇದೀಗ ನಿನ್ನೆ ಮತ್ತೊಮ್ಮೆ ನೆದರಲ್ಯಾಂಡ್ ವಿರುದ್ಧ ಸ್ಪೋಟಕ ಅರ್ಧ ಶತಕ (25 ಎಸೆತಗಳಲ್ಲಿ 50 ರನ್) ಸಿಡಿಸುವ ಮೂಲಕ ವಿಶೇಷ ದಾಖಲೆ ಬರೆದಿದ್ದಾರೆ. ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್‌ನನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ್ದಾರೆ. 

ಪ್ರಸ್ತುತ ವರ್ಷದಲ್ಲಿ 19 ಇನ್ನಿಂಗ್ಸ್‌ಗಳನ್ನಾಡಿರುವ ಮೊಹಮ್ಮದ್ ರಿಜ್ವಾನ್ 124 ಸ್ಟ್ರೈಕ್‌ರೇಟ್‌ ನಲ್ಲಿ 662 ಎಸೆತಗಳಲ್ಲಿ 825 ರನ್‌ಗಳಿಸಿ ಈ ವರ್ಷದ ಟಿ20 ನಲ್ಲಿ ಅತಿಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರು. ಆದರೆ ಸತತ ಬ್ಯಾಟಿಂಗ್ ಲಯ ಕಂಡುಕೊಂಡಿರುವ ಸೂರ್ಯಕುಮಾರ್ 25 ಇನ್ನಿಂಗ್ಸ್‌ಗಳನ್ನು ಎದುರಿಸಿದರೂ 184.86 ಸ್ಟ್ರೈಕ್‌ರೇಟ್‌ನಲ್ಲಿ 469 ಎಸೆತಗಳಲ್ಲೇ 867 ರನ್ ಬಾರಿಸಿ ರಿಜ್ವಾನ್ ಅವರನ್ನು ಹಿಂದಿಕ್ಕಿದ್ದಾರೆ. ಅವರ ಈ ದಾಖಲೆಯಲ್ಲಿ 1 ಶತಕ, 7 ಅರ್ಧಶತಕ, 77 ಬೌಂಡರಿ ಹಾಗೂ 52 ಸಿಕ್ಸರ್‌ಗಳು ಸೇರಿವೆ. 

ಇನ್ನು ಗುರುವಾರ ನೆದರ್‌ಲ್ಯಾಂಡ್ ವಿರುದ್ಧ ಸಿಡ್ನಿಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು. 180 ರನ್‌ಗಳ ಗುರಿ ಬೆನ್ನತ್ತಿದ್ದ ನೆದರ್ಲ್ಯಾಂಡ್ ಟೀಂ ಇಂಡಿಯಾದ ಸಂಘಟಿತ ಬೌಲಿಂಗ್ ದಾಳಿಗೆ ತತ್ತರಿಸಿ ನಿಗದಿತ ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 123 ರನ್‌ಗಳಿಸಿ ಸೋಲೊಪ್ಪಿಕೊಂಡಿತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com