ಭಾರತೀಯ ಮಹಿಳಾ ಕ್ರಿಕೆಟರ್‌ ವೇದಾ ಕೃಷ್ಣಮೂರ್ತಿ ನಿಶ್ಚಿತಾರ್ಥ: ಅವರ ಬಾಳ ಸಂಗಾತಿ ಯಾರು ಗೊತ್ತೆ?

ಭಾರತದ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಕೆಲ ದಿನಗಳಿಂದ ಟೀಂ ಇಂಡಿಯಾದಿಂದ ದೂರ ಉಳಿದಿದ್ದರು. ಆದರೆ, ಈಗ ಅವರ ಬದುಕಿನ ಹೊಸ ಇನ್ನಿಂಗ್ಸ್ ಆರಂಭವಾಗಲಿದೆ.
ವೇದ ಕೃಷ್ಣಮೂರ್ತಿ ಮತ್ತು ಅರ್ಜುನ್ ಹೊಯ್ಸಳ
ವೇದ ಕೃಷ್ಣಮೂರ್ತಿ ಮತ್ತು ಅರ್ಜುನ್ ಹೊಯ್ಸಳ
Updated on

ಭಾರತದ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಕೆಲ ದಿನಗಳಿಂದ ಟೀಂ ಇಂಡಿಯಾದಿಂದ ದೂರ ಉಳಿದಿದ್ದರು. ಆದರೆ, ಈಗ ಅವರ ಬದುಕಿನ ಹೊಸ ಇನ್ನಿಂಗ್ಸ್ ಆರಂಭವಾಗಲಿದೆ. ಈ ಸ್ಟಾರ್ ಮಹಿಳಾ ಆಟಗಾರ್ತಿ ಶೀಘ್ರದಲ್ಲೇ ಸಪ್ತಪದಿ ತುಳಿಯಲ್ಲಿದ್ದಾರೆ.

ಕರ್ನಾಟಕದ ಕ್ರಿಕೆಟಿಗ ಅರ್ಜುನ್‌ ಹೊಯ್ಸಳ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ಸಂಗತಿಯನ್ನು ಸೋಷಿಯಲ್‌ ಮೀಡಿಯಾ ಮೂಲಕ ಬಹಿರಂಗ ಪಡಿಸಿದ್ದಾರೆ. ಅರ್ಜುನ್‌ ಮತ್ತು ವೇದಾ ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡ ಫೋಟೊಗಳು ಈಗ ವೈರಲ್ ಆಗುತ್ತಿವೆ.

ವೇದಾ ಅವರು ತಮ್ಮ ಗೆಳೆಯ ಮತ್ತು ಈಗ ನಿಶ್ಚಿತ ವರ ಅರ್ಜುನ್ ಹೊಯ್ಸಳ ಅವರೊಂದಿಗೆ ಕಾಣಿಸಿಕೊಂಡಿರುವ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ಅರ್ಜುನ್ ಮೊಣಕಾಲಿನ ಮೇಲೆ ಕುಳಿತು ತುಂಬಾ ರೋಮ್ಯಾಂಟಿಕ್ ಆಗಿ ವೇದಾಗೆ ಪ್ರಪೋಸ್ ಮಾಡುತ್ತಿರುವುದು ಕಂಡುಬಂದಿದೆ, ಅವರ ಭಾವಿ ಜೀವನ ಸಂಗಾತಿಯು ಫಿಲ್ಮಿ ಶೈಲಿಯಲ್ಲಿ ಬಹಳ ಸುಂದರವಾಗಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದು, ವೇದಾ ಅದಕ್ಕೆ ಸಮ್ಮತ್ತಿ ಸೂಚಿಸಿರುವುದನ್ನು ಫೋಟೊಗಳಲ್ಲಿ ಕಾಣಬಹುದಾಗಿದೆ.

ಕರ್ನಾಟಕ ರಣಜಿ ಕ್ರಿಕೆಟ್ ತಂಡದ ಆಟಗಾರ ಅರ್ಜುನ್ ಹೊಯ್ಸಳ. ಎಡಗೈ ಬ್ಯಾಟ್ಸ್‌ಮನ್‌ ಆಗಿರುವ ಅರ್ಜುನ್‌, ಕರ್ನಾಟಕ ಪ್ರೀಮಿಯರ್‌ ಲೀಗ್‌ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಹಲವು ಫ್ರಾಂಚೈಸಿಗಳನ್ನು ಪ್ರತಿನಿಧಿಸಿ ಮಿಂಚಿದ್ದಾರೆ.

ವೇದಾ, ಭಾರತ ಮಹಿಳಾ ಕ್ರಿಕೆಟ್‌ ತಂಡದ ಒಬ್ಬ ಸ್ಟಾರ್ ಬ್ಯಾಟರ್‌. ಟೀಮ್ ಇಂಡಿಯಾ ಪರ ಅವರು ಒಟ್ಟು 48 ಏಕದಿನ ಪಂದ್ಯಗಳಲ್ಲಿ ಆಡಿ 829 ರನ್‌ಗಳನ್ನು ಗಳಿಸಿದ್ದಾರೆ. ಮತ್ತೊಂದೆಡೆ, 76 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲೂ ಭಾರತದ ಪರ ಬ್ಯಾಟ್‌ ಬೀಸಿ 875 ರನ್ ಗಳಿಸಿದ್ದಾರೆ. ಆದರೆ, ಕಳಪೆ ಫಾರ್ಮ್‌ ಕಾರಣ ಸದ್ಯ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. ವೇದಾ ಕೃಷ್ಣಮೂರ್ತಿ ಕರ್ನಾಟಕದ ಚಿಕ್ಕಮಗಳೂರಿನಲ್ಲಿರುವ ಕಡೂರು ಮೂಲದವರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com