ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಫೈನಲ್: ಇಂಗ್ಲೆಂಡ್ ಮಣಿಸಿದ ಆಸ್ಟ್ರೇಲಿಯಾಗೆ 7ನೇ ಬಾರಿ ಪ್ರಶಸ್ತಿ
ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿದ ಆಸ್ಟ್ರೇಲಿಯಾ ವನಿತೆಯರ ತಂಡ 7ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.
Published: 03rd April 2022 01:48 PM | Last Updated: 04th April 2022 01:28 PM | A+A A-

ಚಾಂಪಿಯನ್ ಆಸ್ಟ್ರೇಲಿಯಾ
ಕ್ರೈಸ್ಟ್ ಚರ್ಚ್: ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿದ ಆಸ್ಟ್ರೇಲಿಯಾ ವನಿತೆಯರ ತಂಡ 7ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.
World champions! Congratulations to our Australian Women's Cricket Team on a seventh ODI World Cup title.
— Cricket Australia (@CricketAus) April 3, 2022
A huge shoutout to all teams for an outstanding tournament played in great spirit https://t.co/EUANFwh5FU
ಕ್ರೈಸ್ಟ್ ಚರ್ಚ್ ನ ಹ್ಯಾಗ್ಲೆ ಓವಲ್ ಕ್ರೀಡಾಂಗಣದಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಆಸ್ಟ್ರೇಲಿಯಾ ತಂಡ 71 ರನ್ ಗಳ ಭರ್ಜರಿ ಜಯ ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ಹೀಲೆ (170 ರನ್) ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ ನಿಗದಿತ 50 ಓವರ್ ಗಳಲ್ಲಿ 356ರನ್ ಗಳ ಬೃಹತ್ ರನ್ ಪೇರಿಸಿತು. ಈ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಇಂಗ್ಲೆಂಡ್ ತಂಡ ಕೂಡ ನಟಾಲಿಯಾ ಸ್ಕಿವರ್ (ಅಜೇಯ 148) ಏಕಾಂಗಿ ಹೊರಟದ ಹೊರತಾಗಿಯೂ 43.4 ಓವರ್ ನಲ್ಲಿ 286ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದಕೊಂಡು 71ರನ್ ಗಳ ಅಂತರದಲ್ಲಿ ಸೋಲು ಕಂಡಿತು.
ಈ ಗೆಲುವಿನ ಮೂಲಕ ಆಸ್ಟ್ರೇಲಿಯಾ ತಂಡ 7ನೇ ಬಾರಿಗೆ ಐಸಿಸಿ ಪ್ರಶಸ್ತಿ ಮುಡಿಗೇರಿಕೊಂಡಂತಾಗಿದೆ.