ಐಪಿಎಲ್: ನಿಧಾನಗತಿ ಬೌಲಿಂಗ್, ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಗೆ ಭಾರಿ ದಂಡ
ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಗುರುವಾರ ರಾತ್ರಿ ನಡೆದ ಪಂದ್ಯದಲ್ಲಿ ನಿಧಾನಗತಿ ಬೌಲಿಂಗ್ ಮಾಡಿದ ಆರೋಪದ ಮೇರೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಗೆ ಭಾರಿ ದಂಡ ವಿಧಿಸಲಾಗಿದೆ.
Published: 08th April 2022 03:23 PM | Last Updated: 08th April 2022 03:23 PM | A+A A-

ಸಂಗ್ರಹ ಚಿತ್ರ
ಮುಂಬೈ: ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಗುರುವಾರ ರಾತ್ರಿ ನಡೆದ ಪಂದ್ಯದಲ್ಲಿ ನಿಧಾನಗತಿ ಬೌಲಿಂಗ್ ಮಾಡಿದ ಆರೋಪದ ಮೇರೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಗೆ ಭಾರಿ ದಂಡ ವಿಧಿಸಲಾಗಿದೆ.
ನಿಗಧಿತ ಅವಧಿಯಲ್ಲಿ ನಿಗಧಿತ ಓವರ್ಗಳನ್ನು ಪೂರ್ಣಗೊಳಿಸದ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಗೆ ಐಪಿಎಲ್ ನೀತಿ ಸಂಹಿತೆ ಪ್ರಕಾರ 12 ಲಕ್ಷ ರೂ ದಂಡ ವಿಧಿಸಲಾಗಿದೆ.
ನಿನ್ನೆ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ತಂಡ ನಿಗದಿತ 20 ಓವರ್ಗಳಲ್ಲಿ 149 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನು ಹತ್ತಿದ ಲಖನೌ ತಂಡ ಕೇವಲ ನಾಲ್ಕು ವಿಕೆಟ್ ಕಳೆದುಕೊಂಡು ಇನ್ನೂ 2 ಎಸೆತ ಬಾಕಿ ಇರುವಂತೆಯೇ ಮುಟ್ಟಿತು. ಇದರೊಂದಿಗೆ ಲಖನೌ ತಂಡ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಜಯ ಸಾಧಿಸಿ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.
ಮೂರು ಪಂದ್ಯಗಳಿಂದ ಕೇವಲ 1 ಜಯ ಕಂಡಿರುವ ಡೆಲ್ಲಿ ಎರಡು ಪಾಯಿಂಟ್ಗಳೊಂದಿಗೆ 7ನೇ ಸ್ಥಾನದಲ್ಲಿದೆ.