
ಆರ್ ಸಿಬಿಗೆ ಜಯ
ಪುಣೆ: ಮುಂಬೈ ಇಂಡಿಯನ್ಸ್ ವಿರುದ್ಧ ಆಲ್ರೌಂಡ್ ಆಟವಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7 ವಿಕೆಟ್ ಗಳ ಗೆಲುವು ಸಾಧಿಸಿದೆ.
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು (ಆರ್ಸಿಬಿ) ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಅಂತರದ ಗೆಲುವು ಸಾಧಿಸಿದೆ. ಇದರೊಂದಿಗೆ, ಈವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ ಆರ್ಸಿಬಿ ತಂಡವು ಮೂರರಲ್ಲಿ ಗೆಲುವು ಸಾಧಿಸಿದಂತಾಗಿದೆ.
ಮುಂಬೈ ನೀಡಿದ 152 ರನ್ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಆರ್ಸಿಬಿ ಪರ ಆರಂಭಿಕ ಆಟಗಾರ ಅನುಜ್ ರಾವತ್ (66 ರನ್, 47 ಎಸೆತ) ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಗೆಲುವನ್ನು ಸುಲಭವಾಗಿಸಿದರು. ವಿರಾಟ್ ಕೊಹ್ಲಿ (48 ರನ್, 36 ಎಸೆತ) ಕೇವಲ 2 ರನ್ ಅಂತರದಲ್ಲಿ ಅರ್ಧಶತಕ ವಂಚಿತರಾದರು.
ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಮುಂಬೈ ತಂಡಕ್ಕೆ ಆರಂಭಿಕ ಇಶಾನ್ ಕಿಶನ್ ಮತ್ತು ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 151ರನ್ ಗಳಿಸಿತು.
ಆರ್ಸಿಬಿ ಪರ ಹರ್ಷಲ್ ಪಟೇಲ್ ಮತ್ತು ವನಿಂದು ಹಸರಂಗ ತಲಾ ಎರಡು ವಿಕೆಟ್ ಪಡೆದರು. ಆಕಾಶ್ ದೀಪ್ ಸಿಂಗ್ ಒಂದು ವಿಕೆಟ್ ಪಡೆದರು.