ಐಪಿಎಲ್2022: ಗುಜರಾತ್ ಟೈಟನ್ಸ್ ಗೆ ಸೋಲಿನ ರುಚಿ ತೋರಿಸಿದ ಸನ್ ರೈಸರ್ಸ್ ಹೈದರಾಬಾದ್!!
ನಾಯಕ ಕೇನ್ ವಿಲಿಯಮ್ಸನ್ ಆಕರ್ಷಕ ಅರ್ಧಶತಕದ (57) ನೆರವಿನಿಂದ ಸನ್ರೈಸರ್ಸ್ ಹೈದರಾಬಾದ್ ತಂಡವು ಗುಜರಾತ್ ಟೈಟನ್ಸ್ ವಿರುದ್ದ ನಡೆದ ಐಪಿಎಲ್ ಪಂದ್ಯದಲ್ಲಿ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
Published: 12th April 2022 01:23 AM | Last Updated: 12th April 2022 01:23 AM | A+A A-

ಕೇನ್ ವಿಲಿಯಮ್ಸನ್
ಮುಂಬೈ: ನಾಯಕ ಕೇನ್ ವಿಲಿಯಮ್ಸನ್ ಆಕರ್ಷಕ ಅರ್ಧಶತಕದ (57) ನೆರವಿನಿಂದ ಸನ್ರೈಸರ್ಸ್ ಹೈದರಾಬಾದ್ ತಂಡವು ಗುಜರಾತ್ ಟೈಟನ್ಸ್ ವಿರುದ್ದ ನಡೆದ ಐಪಿಎಲ್ ಪಂದ್ಯದಲ್ಲಿ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಮುಂಬೈನ ಡಿ.ವೈ. ಪಾಟೀಲ್ ಸ್ಟೇಡಿಯಂನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಗುಜರಾತ್ ಟೈಟನ್ಸ್ ತಂಡ, ನಾಯಕ ಹಾರ್ದಿಕ್ ಪಾಂಡ್ಯ ಸಮಯೋಚಿತ ಅರ್ಧಶತಕದ (50*) ನೆರವಿನಿಂದ ಏಳು ವಿಕೆಟ್ ನಷ್ಟಕ್ಕೆ 162 ರನ್ ಪೇರಿಸಿತ್ತು.
ಈ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಸನ್ರೈಸರ್ಸ್ ಹೈದರಾಬಾದ್ ತಂಡ ನಾಯಕ ಕೇನ್ ವಿಲಿಯಮ್ಸನ್ (67 ರನ್) ಅಮೋಘ ಬ್ಯಾಟಿಂಗ್ ನೆರವಿನಿಂದ ಇನ್ನೂ ಐದು ಎಸೆತಗಳು ಬಾಕಿ ಉಳಿದಿರುವಂತೆಯೇ 19.1 ಓವರ್ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಜಯ ಗಳಿಸಿತು.
ಇದರೊಂದಿಗೆ ಮೊದಲೆರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದ ಸನ್ರೈಸರ್ಸ್, ಬಳಿಕದ ಎರಡು ಪಂದ್ಯಗಳಲ್ಲಿ ಜಯದ ಹಾದಿಗೆ ಮರಳುವಲ್ಲಿ ಯಶಸ್ವಿಯಾಗಿದೆ. ಅತ್ತ ಸತತ ಮೂರು ಪಂದ್ಯಗಳಲ್ಲಿ ಜಯಗಳಿಸಿದ್ದ ಗುಜರಾತ್, ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿದಂತಾಗಿದೆ.
ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಕೇನ್ ವಿಲಿಯಮ್ಸನ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.